ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ..!

1 min read
Suresh Gowda saaksha tv

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ..!

ತುಮಕೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ, ದಿಢೀರ್ ಅಂತ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ.

ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು.

ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆರ್ಶೀವಾದ, ಕೊಟ್ಟ ಸಹಕಾರ, ಧೈರ್ಯವೇ ಕಾರಣ, ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.

Suresh Gowda saaksha tv

ನಾನು ಎರಡು ಸಲ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಸಲ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷನಾಗಿ. ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು, ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣವಾಗಿತ್ತೇ ಹೊರತು ಬೇರೇನು ಅಲ್ಲ.

ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ.

ಕೋವಿಡ್ ನಿಂದ ಆರ್ಥಿಕ ಹಿಂಜರಿತ, ನೀರಾವರಿ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ಬವಣೆ, ಶಿಕ್ಷಣದ ಗುಣಮಟ್ಟದ ಕುಸಿತದಿಂದ ಕ್ಷೇತ್ರದ ಮಕ್ಕಳು ಅನುಭವಿಸುತ್ತಿರುವ ಯಾತನೆಯ ಹಿನ್ನೆಲೆಯಲ್ಲಿ ಅವರೊಂದಿಗೆ ಸದಾ ಸಮಯ ಇರಬೇಕೆಂದು ಮನಸ್ಸು ಹೇಳುತ್ತಿತ್ತು.

ನನ್ನ ಕ್ಷೇತ್ರದ ಜನರೇ ನನಗೆ ಎಲ್ಲವೂ ಆಗಿರುವುದರಿಂದ ಅವರೊಂದಿಗೆ ಇರಲು ರಾಜೀನಾಮೆ ನಿರ್ಧಾರ ಮಾಡಿದೆ ಎಂಬುದನ್ನು ನನ್ನ ಕ್ಷೇತ್ರದ ಜನರಿಗೆ ಈ ಮೂಲಕ ತಿಳಿಸಲು ಬಯಸುತ್ತೇನೆ.

ಜಿಲ್ಲಾ ಘಟಕದ ಅಧ್ಯಕ್ಷನಾಗಿದ್ದಾಗ ಜಿಲ್ಲೆಯ ಮೂಲೆಮೂಲೆಗಳಿಂದ ಎಲ್ಲಾ ಜಾತಿಗಳ, ಧರ್ಮಗಳ ಜನರು ನನಗೆ ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದವನ್ನು ಈ ಮೂಲಕ ಅರ್ಪಿಸುತ್ತಿದ್ದೇನೆ.

ಇದೇ ರೀತಿಯ ಪ್ರೀತಿ, ಹಾರೈಕೆ, ಬೆಂಬಲ ಇನ್ನೂ ಮುಂದೆಯೂ ನೀಡುವಂತೆ ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd