ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನವರಿ 1ರಿಂದ ಶಾಲಾ-ಕಾಲೇಜು ಆರಂಭ: ಸಿದ್ಧತೆ ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್..!

Kariyappa N by Kariyappa N
December 30, 2020
in Newsbeat, Politics, Samagra karnataka, ರಾಜ್ಯ
schools
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್‍ಒಪಿಯನ್ನು ಆಧರಿಸಿ ಶಾಲಾ ಕಾಲೇಜುಗಳು ಜ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಆರಂಭದ ಪೂರ್ವ ಸಿದ್ಧತೆಯನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪರಿಶೀಲಿಸಿದರು.

suresh kumar
ಮಲ್ಲೇಶ್ವರಂ 18ನೇ ಕ್ರಾಸ್, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು ಸೇರಿದಂತೆ ಹೆಬ್ಬಾಳ, ಮಲ್ಲೇಶ್ವರಂ, ಮತ್ತಿತರ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಸುರೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿಯೊಂದು ಶಾಲೆಗಳಲ್ಲಿ ತರಗತಿ ಕೊಠಡಿಗಳಿಗೆ ಭೇಟಿ ನೀಡುವ ಮೊದಲು ಶಾಲೆಯಲ್ಲಿ ಹಾಜರಿದ್ದ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರನ್ನುದ್ದೇಶಿಸಿ ತರಗತಿಗಳನ್ನು ಆರಂಭಿಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು.

Related posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

July 30, 2026
ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

July 30, 2026


ಮೊದಲ ದಿನದ ಮೊದಲ ತರಗತಿ ಅವಧಿಯಲ್ಲಿ ಕೊರೋನಾ ಕುರಿತು ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳು ಮತ್ತು ವಿಶೇಷವಾಗಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಮಹತ್ವ ಮತ್ತು ಈ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಓದಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಬೇಕಾದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಂದ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತರು ಹೊರ ಬರುತ್ತಿದ್ದಾರೆ. ಅನೇಕ ಕೊರತೆಗಳ ಮಧ್ಯೆಯೂ ಸರ್ಕಾರಿ ಶಾಲೆಗಳಲ್ಲಿ ಅಭ್ಯಸಿರುವ ಅನೇಕ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಏರಿದ್ದಾರೆ. ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.97-98 ಅಂಕಗಳೊಂದಿಗೆ ಉತ್ತೀರ್ಣರಾದ ಸರ್ಕಾರಿ ಶಾಲೆಯ ಮಕ್ಕಳಾದ ಬೆಂಗಳೂರಿನ ಯಾದಗಿರಿಯ ವಲಸೆ ವಿದ್ಯಾರ್ಥಿ ಮತ್ತು ವಿಜಯಪುರದ ಸಾವಳಗಿ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪರಿಶ್ರಮವನ್ನು ಉದಾಹರಿಸಿದ ಸಚಿವರು ಈ ಕುರಿತು ವಿದ್ಯಾರ್ಥಿಗಳ ಗಮನಕ್ಕೆ ತಂದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ತಾವೂ ಸಹ ಅದೇ ರೀತಿ ಹೆಚ್ಚಿನ ಅಂಕಗಳನ್ನು ಪಡೆಯಬೇಕೆಂಬ ಹುಮ್ಮಸ್ಸು, ಆಸಕ್ತಿ ಮೂಡುವಂತೆ ಪ್ರೇರೇಪಿಸಬೇಕೆಂದು ಶಿಕ್ಷಕ ಸಮೂಹಕ್ಕೆ ಸುರೇಶ್ ಕುಮಾರ್ ಸಲಹೆ ನೀಡಿದರು.
ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೈತೊಳೆಯಲು ಸ್ಯಾನಿಟೈಸರ್ ಇಲ್ವೇ ಸಾಬೂನು ಬಳಸು

ವುದು, ಉಪಾಧ್ಯಾಯರು ಕೋವಿಡ್ ಪರೀಕ್ಷೆ ಫಲಿತಾಂಶದೊಂದಿಗೆ ಬರುವುದು, ಫೇಸ್ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಧರಿಸುವುದು, ಮಕ್ಕಳ ಶಾರೀರಿಕ ಅಂತರವನ್ನು ಉಳಿಸಿಕೊಳ್ಳುವಲ್ಲಿ ಗಮನ ಹರಿಸುವುದು, ಅವರ ಆರೋಗ್ಯ, ರೋಗಲಕ್ಷಣಗಳ ಕುರಿತು ಆಗಾಗ್ಗೆ ಗಮನ ಹರಿಸುವುದು, ತರಗತಿ ಕೊಠಡಿಯಲ್ಲಿ ಚಿಕ್ಕ ಸಂಖ್ಯೆಯ ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದರು.
ಸಂಜೆ ಶಾಲೆ ಮುಗಿದ ನಂತರ ಶಾಲಾವರಣ, ತರಗತಿ ಕೊಠಡಿ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಮರೆಯದೇ ಪಾಲಿಸಬೇಕಿದೆ. ಈಗಾಗಲೇ ಹೆಚ್ಚಿನ ದಿನಗಳು  ಮುಗಿದಿರುವುದರಿಂದ ಉಪನ್ಯಾಸಕರು ಇಲಾಖೆ ನಿಗದಿಪಡಿಸುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪೋರ್ಷನ್ ಮುಗಿಸುವುದರತ್ತ ಗಮನ ಹರಿಸಬೇಕು ಎಂದರು.
ಕಳೆದ ವರ್ಷದ ಬಸ್ ಪಾಸುಗಳನ್ನೇ ಬಳಸಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕೆಂದು  ಹೇಳಿದರು.


ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರು ಉತ್ಸುಕರಾಗಿದ್ದು, ಪ್ರಥಮ ಪಿಯುಸಿ ತರಗತಿಗಳನ್ನೂ ಆರಂಭಿಸಬೇಕೆಂದು ಒತ್ತಾಯಿಸುತ್ತಿದ್ದಾರೆಂದು ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಮನಸ್ಥಿತಿಯನ್ನು ಸಚಿವರ ಗಮನಕ್ಕೆ ತಂದಾಗ, ಪರಿಸ್ಥಿತಿಯನ್ನು ಅವಲೋಕಿಸಿ ಈ ಕುರಿತು ಕೆಲ ದಿನಗಳ ನಂತರ ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವರು  ಹೇಳಿದರು.
ಶಾಲೆಗಳ 10ನೇ ತರಗತಿ ಮತ್ತು ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳ ಸಂಖ್ಯೆಯನ್ನು ವಿಚಾರಿಸಿ ಎಷ್ಟು ತಂಡಗಳು ಮತ್ತು ಎಷ್ಟು ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂಬುದನ್ನು ಗಮನಿಸಿ ತರಗತಿ ಕೊಠಡಿಗಳನ್ನು ಪರಿಶೀಲಿಸಿದರು.
ನಂತರ ರಾಜ್ಯದ ವಿವಿಧೆಡೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಡಿಡಿಪಿಐ, ಡಿಡಿಪಿಯು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು, ಅಗತ್ಯ ಸಲಹೆ, ಸೂಚನೆಗಳನ್ನು  ನೀಡಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangalorechecked SchoolsMinister for Department of Educationpu collegesschools starts jan.01suresh kumar
ShareTweetSendShare
Join us on:

Related Posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram