ಕೋವಿಡ್ ಸೋಂಕು ನಿಯಂತ್ರಣಕ್ಕೆ ಆತ್ಮ ಸ್ಥೈರ್ಯ ಇರಲಿ – ಸಚಿವ ಸುರೇಶ್ ಕುಮಾರ್
ಚಾಮರಾಜನಗರ : ಖಾಸಗಿ ಆಸ್ಪತ್ರೆ ತೆರಳಿ ಅಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗದೇ ಉಸಿರಾಟ ತೊಂದರೆಯಾದಾಗ ಕೋವಿಡ್ ಆಸ್ಪತ್ರೆಗೆ ಬರ್ತಾ ಇದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಸುರೇಶ್ ಕುಮಾರ್ ಚಾಮರಾಜನಗರದಲ್ಲಿ ಹೇಳಿದ್ದಾರೆ.
ನೆಗೆಡಿ, ಜ್ವರ, ಮೈ ಕೈ ನೋವು ಕಾಣಿಸಿಕೊಂಡ ಬಳಿಕ ಕೂಡಲೇ ಕೋವಿಡ್ ಟೆಸ್ಕ್ ಮಾಡಿಸಿಕೊಳ್ಳುವುದು ಉತ್ತಮ ಎಂದು ಹೇಳಿರುವ ಸಚಿವರು , ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊನೆಯ ಹಂತಕ್ಕೆ ಕೋವಿಡ್ ಆಸ್ಪತ್ರೆಗೆ ದಾಖಲಾದವರೆ ಹೆಚ್ಚಾಗಿ ಮೃತರಾಗುತ್ತಿದ್ದಾರೆ ಎಂದಿದ್ದಾರೆ. ಇದೇ ವೇಳೆ ಕೋವಿಡ್ ಸೋಂಕು ನಿಯಂತ್ರಣಕ್ಕೆ ಆತ್ಮ ಸ್ಥೈರ್ಯ ಇರಲಿ. ಸೋಂಕು ನಿಯಂತ್ರಣಕ್ಕೆ ದೈರ್ಯವೇ ಮದ್ದು ಎಂದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.