ಕೋವಿಡ್-19 ಹಿನ್ನೆಲೆಯಲ್ಲಿ ಶಾಲಾ ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ : ಸಚಿವ ಸುರೇಶ್ ಕುಮಾರ್

1 min read
suresh kumar

ಕೋವಿಡ್-19 ಹಿನ್ನೆಲೆಯಲ್ಲಿ ಶಾಲಾ ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ – ಸಚಿವ ಸುರೇಶ್ ಕುಮಾರ್

ಕೋವಿಡ್-19ರ ನಂತರದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಶೈಕ್ಷಣಿಕ ಸಾಲಿಗೆ ಸೀಮಿತಗೊಳಿಸಿ, 2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ವಿಭಾಗ, ವಿಷಯ, ಭಾಷೆ ಮತ್ತು ಸಂಯೋಜನೆಗಳನ್ನು ಅನುಮತಿಸುವ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ವಿನಾಯಿತಿಯನ್ನು ನೀಡಿ ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ, ನವೀಕರಣ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರದ ಸ್ಪಷ್ಠೀಕರಣವನ್ನ ಬಿಡುಗಡೆ ಮಾಡಲಾಗಿದೆ ಎಂದಿರುವ ಸಚಿವರು ಆರ್.ಟಿ.ಇ. ಮರುಪಾವತಿ, ದಾಖಲಾತಿ/ಹಾಜರಾತಿಗಳನ್ನು ನೋಂದಣಿ, ನವೀಕರಣದ ನೆಪದಲ್ಲಿ ಅನವಶ್ಯಕ ಸಮಸ್ಯೆಗಳಿಗೆ ಕಾರಣವಾಗದಂತೆ ಕ್ರಮ ವಹಿಸಬೇಕೆಂದು ಇಲಾಖಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

suresh kumar

ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ಕುರಿತಂತೆ ಕಠಿಣ ಕ್ರಮಗಳನ್ನು ಅನುಸರಿಸಬೇಕಾಗಿರುವುದು ಸರ್ಕಾರದ ಪ್ರಾಥಮಿಕ ಜವಬ್ದಾರಿಯಾಗಿದ್ದು, ಅಸ್ತಿತ್ವದಲ್ಲಿರುವ ಹಾಗೂ ಹೊಸ ಶಿಕ್ಷಣ ಸಂಸ್ಥೆಗಳಿಗೆ ವಿಶಿಷ್ಠ ನಿಯಮಗಳ ರಚನೆಗೆ ಈಗಾಗಲೇ ವಿಧಾನ ಪರಿಷತ್ತ್ ಸದಸ್ಯರಾದ ಶ್ರೀ ಎಸ್.ವಿ. ಸಂಕನೂರ ಇವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿಯನ್ನ ರಚಿಸಿ ಆದೇಶವನ್ನು ಹೊರಡಿಸಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಈ ಸಮಿತಿಯು ವಿದ್ಯಾರ್ಥಿ ಸಂವೇದಿತವಾದ ಶಾಲಾ ಸುರಕ್ಷತಾ ಕ್ರಮಗಳನ್ನು ಇಲ್ಲಿಯವರೆಗಿನ ಇಲಾಖಾದೇಶಗಳು, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಲಿದೆ ಎಂದು ಅವರು ಹೇಳಿದ್ದಾರೆ. ಶಾಲೆಯ ಭೌತಿಕ ಸುರಕ್ಷತೆ, ಮೂಲಭೂತ ಸೌಕರ್ಯ, ವಿಪತ್ತು ನಿರ್ವಹಣೆ, ಆರೋಗ್ಯ, ಸಾರಿಗೆ, ತುರ್ತು ಸನ್ನದ್ದತೆ ಸೇರಿದಂತೆ ಎಲ್ಲ ಆಯಾಮಗಳನ್ನು ಈ ಸಮಿತಿಯು ಸಮಗ್ರವಾಗಿ ಅವಲೋಕಿಸಲಿದೆ. ಈ ಸಮಿತಿಯು ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ರಾಜಿ ಇಲ್ಲದ ರೀತಿಯಲ್ಲಿ ನಿಯಮಗಳನ್ನು ರೂಪಿಸಲಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd