ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ 2020-21 ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ 28-04 ರಿಂದ 18 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು.
ಆದೆರ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.