ನಾಪೋಕ್ಲು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಅಸಂಬದ್ಧ ಪದಗಳನ್ನು ಬಳಸಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಳ್ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ. ನಾಪೋಕ್ಲುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿ ಅವರು ತುಂಬಾ ಹಿರಿಯರು. ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿದ್ದು, ಸರಿಯಲ್ಲ. ಹುದ್ದೆ ಮತ್ತು ಹಿರಿತನವನ್ನು ಗಮನದಲ್ಲಿಟ್ಟುಕೊಂಡು ಅವರು ಮಾತನಾಡಬೇಕಿತ್ತು. ದೊರೆಸ್ವಾಮಿ ಅವರು ಹೇಳಬಾರದನ್ನು ಹೇಳಿದ್ರೆ, ಕೇಳಬಾರದನ್ನು ಕೇಳಬೇಕಾಗುತ್ತದೆ ಎಂದು ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








