ಮೋದಿ ಸಂಪುಟಕ್ಕೆ ಸರ್ಜರಿ : ಐದಾರು ಸಚಿವರಿಗೆ ಕೋಕ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಮೇರ್ಜರಿ ಸರ್ಜರಿ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂಪುಟದಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದ್ದು, ಐದಾರು ಸಚಿವರಿಗೆ ಕೋಕ್ ನೀಡಿ, ಕೆಲ ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಈ ಸಂಬಂಧ ಪ್ರಧಾನಿ ಮೋದಿ ನೇತೃತ್ವದಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿ.ಎಲ್. ಸಂತೋಷ್ ನಿನ್ನೆ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವರ ಕಾರ್ಯಕ್ಷಮತೆ ಆಧಾರದಲ್ಲಿ ಸಂಪುಟದಿಂದ ಕೆಲವರನ್ನು ಕೈಬಿಡಲು ಈ ವೇಳೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದ್ದು, ಯುವ ಹೊಸ ಮುಖಗಳಿಗೆ ಸ್ಥಾನ ನೀಡುವ ಸಾಧ್ಯತೆಯಿದೆ.
ಪ್ರಮುಖವಾಗಿ ಮುಂಬರುವ ವಿವಿವಧ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಆ ರಾಜ್ಯಗಳ ಸಂಸದರಿಗೆ ಸಂಪುಟದಲ್ಲಿ ಸ್ಥಾನ ನೀಡುವ ನಿಟ್ಟಿನಲ್ಲಿಯೂ ಚರ್ಚೆ ನಡೆದಿದೆ.