ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಗೆ ಶಸ್ತ್ರಚಿಕಿತ್ಸೆ – ಆರೋಗ್ಯ ಸ್ಥಿರ
ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಜುಲೈ 26 ಸೋಮವಾರ ತಡರಾತ್ರಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಯೆನೆಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಸೋಮವಾರ ಡಯಾಲಿಸಿಸ್‌ಗೆ ಒಳಗಾಗಿದ್ದರು. ಅವರು ತೀವ್ರ ನಿಗಾ ಘಟಕದಲ್ಲಿದ್ದು, ಅನುಭವಿ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತರ ಮೆದುಳಿನಲ್ಲಿ ರೂಪುಗೊಂಡ ರಕ್ತ ಹೆಪ್ಪುಗಟ್ಟುವಿಕೆ ತೆಗೆದುಹಾಕಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರ ಆಪ್ತ ಸಹಾಯಕರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಆಸ್ಕರ್ ಶೀಘ್ರದಲ್ಲೇ ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಆಶಿಸಿದ್ದಾರೆ.
ಸೋಮವಾರ ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕರಾದ ಫಾ. ಮ್ಯಾಥ್ಯೂ ವಾಸ್ ಮತ್ತು ಬಾಂಡೆಲ್ ಚರ್ಚ್ ಪ್ರೀಸ್ಟ್ ಫ್ರಾ. ಆಸ್ಕರ್ ಅವರ ಪತ್ನಿ ಬ್ಲಾಸಮ್ ಫರ್ನಾಂಡಿಸ್ ಮತ್ತು ಮಕ್ಕಳನ್ನು ಭೇಟಿ ಮಾಡಿದರು ಮತ್ತು ಆಸ್ಕರ್ ಅವರ ಶೀಘ್ರ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1419455676988940288?s=19
ಮೂತ್ರಪಿಂಡ ವೈಫಲ್ಯದ ಸಮಸ್ಯೆಯಿಂದ ದೂರವಿರುವುದು ಹೇಗೆ ?#Saakshatv #healthtips #kidneyfailure https://t.co/o7jyBu2BVp
— Saaksha TV (@SaakshaTv) July 26, 2021
https://twitter.com/SaakshaTv/status/1419863151969980422?s=19
https://twitter.com/SaakshaTv/status/1420020177807286282?s=19
https://twitter.com/SaakshaTv/status/1419500920677838856?s=19
#Surgery #OscarFernandes








