ರಾಜಸ್ಥಾನದಲ್ಲಿ ರಾಜಕೀಯ ಬೆಳವಣಿಗೆಗಳು ತಾರಕಕ್ಕೇರಿದ ಬೆನ್ನಲ್ಲೇ ಸಿಎಂ ಅಶೋಕ್ ಗೆಹ್ಲೋಟ್ ರ ಸಹೋದರನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ರೇಡ್ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಕೇಂದ್ರ ಸರ್ಕಾರ ದೇಶದಲ್ಲಿ ರೇಡ್ ರಾಜ್’ ನಿರ್ಮಿಸಿದೆ. ಇಂಥಹ ಬೆದರಿಕೆಗಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿರುವ ಸುರ್ಜೇವಾಲಾ ಉತ್ತರಪ್ರದೇಶದಲ್ಲಿ ಗುಂಡಾರಾಜ್, ಜಂಗಲ್ ರಾಜ್ಇದೆ. ಮೋದಿ ಅವರು ಭಾರತದಲ್ಲಿ ರೇಡ್ ರಾಜ್ ನಿರ್ಮಿಸುತ್ತಿದ್ದಾರೆ. ಕಾಂಗ್ರೆಸ್ ಇದಕ್ಕೆ ಹೆದರುವುದಿಲ್ಲ. ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತಂತ್ರವೂ ಸಕ್ಸಸ್ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ ಅವರ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಅಧಿಕಾರ...








