ನವದೆಹಲಿ: ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ಖಾಲಿಯಾಗಿರುವ ಯಾದಗಿರಿಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಚುನಾವಣೆಯನ್ನು ಚುನಾವಣಾ ಆಯೋಗ ಮೇ 7ರಂದು ಘೋಷಿಸಿದೆ.
ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಲೋಕಸಭಾ ಚುನಾವಣೆಯಂದೇ ರಾಜ್ಯದ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗಿದೆ.
ರಾಜ್ಯದಲ್ಲಿ ಮೇ 7ರಂದು ರಡನೇ ಹಂತದ ಚುನಾವಣೆ ನಡೆಯಲಿದ್ದು, ಅಂದೇ ಸುರಪುರದಲ್ಲೂ ಉಪಚುನಾವಣೆ ನಡೆಯಲಿದೆ. ಹೀಗಾಗಿ ಸುರಪುರ ವಿಧಾನಸಭಾ ಕ್ಷೇತ್ರದ ಜನರು ಲೋಕಸಭೆ ಮತ್ತು ವಿಧಾನಸಭೆಗೆ ಮತವನ್ನು ಹಾಕಲಿದ್ದಾರೆ.