ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬುಧವಾರ ಆರು ನಕ್ಸಲೀಯರು ಶರಣಾಗಿದ್ದರು. ಗುರುವಾರ ಮುಂಡಗಾರು ಲತಾ, ಸುಂದರಿ ಕೊತ್ತೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿಗೆ NIA ವಿಶೇಷ ಕೋರ್ಟ್ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕೋರ್ಟ್‌ಗೆ ಹಾಜರುಪಡಿಸುವ ಮುನ್ನ 6 ನಕ್ಸಲೀಯರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಇದೀಗ ನಕ್ಸಲೀಯರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಸರ್ಕಾರದಲ್ಲಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ, ಜಂಗಲ್ ರಾಜ್ಯವಾಗಿದೆ
ಬೆಂಗಳೂರು: ರಾಜ್ಯ ಸರ್ಕಾರ ಕುರ್ಚಿಗಾಗಿ ಕಿತ್ತಾ ನಡೆಸುತ್ತಿದೆ. ಪರಿಣಾಮ ಇಡೀ ರಾಜ್ಯವೇ ಜಂಗಲ್ ಆದಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆಕ್ರೋಶ ವ್ಯಕ್ತಪಡಿಸಿದ್ದಾರೆ....