Suryakumar | ಟೀಂ ಇಂಡಿಯಾದ ಅವತಾರ ಪುರುಷ ಸೂರ್ಯ ಭಾಯ್
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ.
ತಿರುವನಂತಪುರಂ ಅಂಗಳದಲ್ಲಿ ನಡೆದ ಮೊದಲ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾ ಎಂಟು ವಿಕೆಟ್ ಗಳಿಂದ ಗೆಲುವು ದಾಖಲಿಸಿದೆ.
ಇದರೊಂದಿಗೆ ಮೂರು ಪಂದ್ಯಗಳ ಟಿ 20 ಸರಣಿಯಲ್ಲಿ ಟೀಂ ಇಂಡಿಯಾ 1 – 0 ಅಂತರದಲ್ಲಿ ಮುನ್ನಡೆಯಲ್ಲಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಎಂಟು ವಿಕೆಟ್ ಕಳೆದುಕೊಂಡು 106 ರನ್ ಗಳಿಸಿತ್ತು.
ಟೀಂ ಇಂಡಿಯಾದ ಬೌಲರ್ ಅರ್ಷ್ ದೀಪ್ ಸಿಂಗ್ ಮೂರು ವಿಕೆಟ್ ಪಡೆದರೇ, ಚಹಾರ್, ಹರ್ಷಲ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು.
ಇನ್ನು 107 ರನ್ ಗಳ ಗುರಿಯೊಂದಿಗೆ ಕಣಕ್ಕಿಳಿದ ಭಾರತ ತಂಡ 16.4 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.
ಟೀಂ ಇಂಡಿಯಾ ಪರ ಕೆ.ಎಲ್.ರಾಹುಲ್ 51 ರನ್ ಗಳಿಸಿದ್ರೆ ಸೂರ್ಯ ಕುಮಾರ್ ಯಾದವ್ 50 ರನ್ ಗಳಿಸಿದರು.
ಈ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಸೂರ್ಯ ಕುಮಾರ್ ಯಾದವ್ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಟಿ 20 ಕ್ರಿಕೆಟ್ ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಸಿಕ್ಸರ್ ಗಳನ್ನು ಸಿಡಿಸಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.
2022ರಲ್ಲಿ ಇಲ್ಲಿಯವರೆಗೂ ಸೂರ್ಯ 45 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಇದಕ್ಕೂ ಮುನ್ನಾ ಈ ದಾಖಲೆ ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್ ಮೊಹ್ಮದ್ ರಿಜ್ವಾನ್ ಹೆಸರಿನಲ್ಲಿತ್ತು.
ರಿಜ್ವಾನ್ 2021ರಲ್ಲಿ 42 ಸಿಕ್ಸರ್ ಗಳನ್ನು ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ಸೂರ್ಯ ಬ್ರೇಕ್ ಮಾಡಿದ್ದಾರೆ.
ಅದೇ ರೀತಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ ಗಳನ್ನು ಸಿಡಿಸಿದ ಆಟಗಾರನಾಗಿ ಕೂಡ ಸೂರ್ಯ ದಾಖಲೆ ನಿರ್ಮಿಸಿದ್ದಾರೆ.
ಈ ವರ್ಷ ಸೂರ್ಯ ಇಲ್ಲಿಯವರೆಗೂ 732 ರನ್ ಗಳಿಸಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಟೀಂ ಇಂಡಿಯಾದ ಹಿರಿಯ ಆಟಗಾರ ಶಿಖರ್ ಧವನ್ ಹೆಸರಿನಲ್ಲಿತ್ತು. ಧವನ್ 2018ರಲ್ಲಿ 689 ರನ್ ಗಳಿಸಿದ್ರು.