ನವದೆಹಲಿ: ಭಾರತೀಯ ಕ್ರಿಕೆಟ್ ನ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್(Suryakumar Yadav) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಾಂಗ್ಲಾದೇಶ (Bangladesh) ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೂ ಮುನ್ನ (Test Cricket) ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಕೈಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸೂರ್ಯಕುಮಾರ್ ಯಾದವ್ ಅವರು ಬುಚ್ಚಿ ಬಾಬು ಟೂರ್ನಿಯಲ್ಲಿ ಮುಂಬೈ (Mumbai) ತಂಡದ ಪರ ಆಡುತ್ತಿದ್ದಾರೆ. ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೈಗೆ ಗಂಭೀರವಾಗಿ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಯಾವ ಪ್ರಮಾಣದಲ್ಲಿ ಗಾಯವಾಗಿದೆ ಎಂಬುವುದು ಮಾತ್ರ ತಿಳಿದು ಬಂದಿಲ್ಲ.
ಸೆ.19 ರಿಂದ ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್ ಸರಣಿ ಪಂದ್ಯಗಳು ಆಡಲಿದೆ. ಟೆಸ್ಟ್ ನಲ್ಲಿಯೂ ಕಣಕ್ಕೆ ಇಳಿಯುವ ಬಯಕೆಯಲ್ಲಿ ಸೂರ್ಯ ಇದ್ದರು.