ನಟ ಸುಶಾಂತ್ ಸಾವಿಗೆ ಮನನೊಂದು ಯುವತಿಯ ಆತ್ಮಹತ್ಯೆ
ವಿಶಾಖಪಟ್ಟಣಂ, ಜೂನ್ 21: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಆಘಾತದಿಂದ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ 21 ವರ್ಷದ ಯುವತಿ ಸುಶಾಂತ್ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಶಾಂತ್ ಸಿಂಗ್ ಅವರ ಹುಚ್ಚು ಅಭಿಮಾನಿಯಾಗಿದ್ದ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ಸಾವಿನ ಬಳಿಕ ಆಘಾತಕ್ಕೆ ಒಳಗಾಗಿದ್ದ ಶಿಕ್ಷಕಿ ನಟನ ಸಾವಿನ ಕುರಿತ ವಿಡಿಯೋಗಳನ್ನು ನೋಡಿ ಖಿನ್ನತೆಗೆ ಒಳಗಾಗಿದ್ದರು. ಸುಶಾಂತ್ ಸಾವಿನ ಬಳಿಕ ದುಃಖದಿಂದ ಮನೆಯವರೊಡನೆ ಮಾತನಾಡುವುದನ್ನೇ ಈಕೆ ನಿಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಮತ್ತು ತನಿಖೆಯಲ್ಲಿ ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.