ಸುಶಾಂತ್ ಸಿಂಗ್ ರಜಪೂತ್ ತಂದೆ ಆಸ್ಪತ್ರೆಗೆ ದಾಖಲು..!
ಹರಿಯಾಣ: ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ಸಾವಿನ ಚಿಂತೆಯಲ್ಲೇ ಕೊರಗಿಹೋಗಿದ್ದ ಅವರ ತಂದೆ ಕೆ.ಕೆ ಸಿಂಗ್ ಇದೀಗ ಅನಾರೋಗ್ಯಕ್ಕೀಡಾಗಿದ್ದಾರೆ. ಸುಶಾಂತ್ ಸಿಂಗ್ ಅವರ ಸಾವು ಆತ್ಮಹತ್ಯೆಯೋ, ಕೊಲೆಯೋ ಎಂಬ ಪ್ರಶ್ನೆಗಳಿಗೆ ಈವರೆಗೂ ಸ್ಪಷ್ಟವಾಗಿ ಉತ್ತರ ಸಿಕ್ಕಿಲ್ಲ. ಈ ಪ್ರಕರಣ ದಿನೇ ದಿನೇ ಹೊಸ ಹೊಸ ತಿರುವು ಪಡೆಯುತ್ತಾ ಸಾಗುತ್ತಿದೆ. ಇದೇ ಚಿಂತೆಯಲ್ಲಿ ಕೊರಗುತ್ತಾಯಿರೋ ಅವರ ತಂದೆ ಅನಾರೋಗ್ಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿದ್ದು, ಹರಿಯಾಣದ ಫರಿದಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆ.ಕೆ ಸಿಂಗ್ ಅವರು ಆಸ್ಪತ್ರೆಯಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ಸುಶಾಂತ್ ಅಭಿಮಾನಿಗಳು ಕೆಕೆ ಸಿಂಗ್ ಬೇಗನೇ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಮೂಲಗಳ ಪ್ರಕಾರ ಕೆಕೆ ಸಿಂಗ್ ಅವರು ಚೇತರಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
‘ಸೆಕ್ಸ್ ವರ್ಕರ’ನ್ನು ರೂಮ್ ಗೆ ಕಳುಹಿಸಲಿಲ್ಲ ಅಂತ ಈ ನೀಚರು ಮಾಡಿದ್ದೇನು..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel