ಕಾಂಗ್ರೆಸ್ ಪಕ್ಷಕ್ಕೆ ಸುಶ್ಮಿತಾ ದೇವ್ ರಾಜೀನಾಮೆ..!
ನವದೆಹಲಿ : ಕಾಂಗ್ರೆಸ್ ಪಕ್ಷಕ್ಕೆ ಬೆಳ್ಳಂ ಬೆಳಿಗ್ಗೆ ಆಘಾತ ಎದುರಾಗಿದೆ. ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಸುಶ್ಮಿತಾ ದೇವ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಸುಶ್ಮಿತಾ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಸುಶ್ಮಿತಾ ದೇವ್ ಅವರು, ‘ಈ ಪತ್ರವನ್ನು ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪರಿಗಣಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಪಕ್ಷದ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ಅಂದಹಾಗೆ ಕಾಂಗ್ರೆಸ್ ನೊಂದಿಗೆ ಸುಶ್ಮಿತಾ ದೇವ್ ಅವರು ಮೂರು ದಶಕಗಳ ಒಡನಾಟವನ್ನು ಹೊಂದಿದ್ದರು. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಸುದೀರ್ಘ ಒಡನಾಟಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ.









