ಮೈಸೂರು: ಕಲುಷಿತ ನೀರು ಸೇವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, 12 ಜನ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಈ ಘಟನೆ ಸಾಲಿಗ್ರಾಮ (Saligrama) ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಗೋವಿಂದೇಗೌಡ (65) ಸಾವನ್ನಪ್ಪಿರುವ ವ್ಯಕ್ತಿ. ಗ್ರಾಮದ ಟ್ಯಾಂಕ್ ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಶುರುವಾಗಿದೆ. ಕೂಡಲೇ ಅಸ್ವಸ್ಥರನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರ ತಂಡ ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಜನರ ಆರೋಗ್ಯ ಪರೀಕ್ಷೆ ನಡೆಸುತ್ತಿದ್ದಾರೆ.







