ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲಕಾಪುರ ಕ್ರಾಸ್ ನ ಎಸ್ ಡಿಎಂ ವೈನರಿ ಕಾರ್ಖಾನೆ ಬಳಿ ನಡೆದಿದೆ. ನಡು ಬೀದಿಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆಗೈದಿದ್ದಾನೆ. ಹಿಂದೂಪುರ ಮೂಲದ ಶಾನಜ್ (28)ಕೊಲೆಯಾದ ಮಹಿಳೆಯಾಗಿದ್ದು, ಅಲಕಾಪುರ ಗ್ರಾಮದ ಪತಿ ಅಂಜುಮನ್ ಖಾನ್ ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ.
ಕೊಲೆ ಮಾಡಿದ ನಂತರ ಗೌರಿಬಿದನೂರು ಗ್ರಾಮಾಂತರ ಠಾಣೆಗೆ ತೆರಳಿ ಶರಣಾಗಿದ್ದಾನೆ. ಜೊತೆಗೆ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದಾನೆ. ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.