ಮಂಡ್ಯ: ವೈದ್ಯರೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯರೇ ಈ ರೀತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಹೆಚ್ಚು ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಸಾವನ್ನಪ್ಪಿರುವುದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಘಟನೆ ಕುಶಾಲನಗರ ತಾಲೂಕಿನ ಆನೆಕಾಡು ಹತ್ತಿರ ನಡೆದಿದೆ. ಕಾರಿನಲ್ಲಿ ವೈದ್ಯರ ಶವ ಪತ್ತೆಯಾಗಿದೆ. ಹುಳ್ಳೇನಹಳ್ಳಿ ಆಲೆಮನೆಯಲ್ಲಿ ನಡೆಯುತ್ತಿದ್ದ ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣವನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಭೇದಿಸಿ 9 ಜನರನ್ನು ಇತ್ತೀಚೆಗೆ ಬಂಧಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ಹೀಗಾಗಿ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿತ್ತು. ಇದರ ಬೆನ್ನಲ್ಲಿಯೇ ವೈದ್ಯರ ಸಾವು ಅನುಮಾನ ಹುಟ್ಟಿಸಿದೆ.