ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗ್ರಾಮೀಣ ಶಾಲೆಗಳ ಮೂಲಸೌಕರ್ಯಕ್ಕೆ ಸುಸ್ಥಿರ ಅಭಿವೃದ್ಧಿ ಆಂದೋಲನ: ಸುರೇಶ್ ಕುಮಾರ್

Kariyappa N by Kariyappa N
January 22, 2021
in Newsbeat, Politics, Samagra karnataka, ರಾಜ್ಯ
govt school
Share on FacebookShare on TwitterShare on WhatsappShare on Telegram

ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ, ಶೌಚಾಲಯ ನಿರ್ಮಾಣ, ಶಾಲಾ ಕಾಂಪೌಂಡ್, ಅಡುಗೆ ಮನೆ ನಿರ್ಮಾಣ, ಆಟದ ಮೈದಾನ ಸೇರಿದಂತೆ ಮೂಲಸೌಕರ್ಯಕ್ಕೆ ಸುಸ್ಥಿರ ಅಭಿವೃದ್ಧಿ ಆಂದೋಲನ ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ರಾಜ್ಯದ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೆರವಿನಲ್ಲಿ ಶಾಲೆಗಳ ಸುಸ್ಥಿರ ಅಭಿವೃದ್ಧಿಗೆ ಬೃಹತ್ ಅಭಿವೃದ್ಧಿಯನ್ನು ಆಂದೋಲನ ಕೈಗೆತ್ತಿಕೊಳ್ಳಲಾಗಿದೆ.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದ ಪ್ರತಿಯೊಂದು ಶಾಲೆಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮತ್ತು ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದ ಶಾಲೆಗಳಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 1500ಕ್ಕೂ ಹೆಚ್ಚು ಶಾಲೆಗಳಲ್ಲಿ ಗುಣಮಟ್ಟದ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಶುದ್ಧ ನೀರು ಪೂರೈಕೆ ಮಾಡಲು ಗ್ರಾಮದ ನೀರು ಸಂಪರ್ಕ ಮಾರ್ಗದಿಂದ ಶಾಲೆಯ ಸಂಪ್ ಗೆ ನೀರು ಪೂರೈಸಿ ಅಲ್ಲಿಂದ ಶಾಲೆಯ ಮೇಲಿನ ಟ್ಯಾಂಕ್ ಗೆ ನೀರು ಪೂರೈಸಿ ಶಾಲೆಗಳ ಶೌಚಾಲಯ, ಅಡುಗೆ ಮನೆ ಮತ್ತು ಕೈತೊಳೆಯುವ ಸ್ಥಳಕ್ಕೆ ನೀರು ಪೂರೈಕೆ ಮಾಡುವಂತೆ ಪೈಪ್‍ಲೈನ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

suresh kumar
ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರು ಘಟಕಗಳಿಂದ ಶಾಲೆಗಳಿಗೆ ಯಾವುದೇ ಶುಲ್ಕ ಪಡೆಯದೇ ಉಚಿತವಾಗಿ ನೀರು ಪೂರೈಕೆ ಮಾಡಲು ಈಗಾಗಲೇ ಆರ್.ಡಿ.ಪಿ.ಆರ್ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಕಳೆದ ಡಿ. 09ರಂದು ಆರ್.ಡಿ.ಪಿ.ಆರ್ ಇಲಾಖೆ ಆದೇಶ ನೀಡಿದೆ.
ಜಲಜೀವನ್  ಮಿಷನ್  ಅಡಿಯಲ್ಲಿ ನಮ್ಮ  17,700 ಶಾಲೆಗಳಲ್ಲಿ ಕುಡಿಯುವ ನೀರು ಪೂರೈಕೆ ಘಟಕಗಳನ್ನು  ಇದೇ ಫೆಬ್ರವರಿ ಕೊನೆಯೊಳಗೆ ಪೂರ್ಣಗೊಳಿಸಲಾಗುವುದು. ಶಾಲಾ ವ್ಯಾಪ್ತಿಯಲ್ಲಿ ಸಮುದಾಯ ಕಸದ ಬುಟ್ಟಿಗಳಿಂದ ತ್ಯಾಜ್ಯ ವಿಂಗಡಣೆ ಮಾಡಲಾಗುವುದು. ಇದನ್ನು ಗ್ರಾಮ ಪಂಚಾಯ್ತಿಗಳು ನಿರ್ವಹಿಸಲಿದ್ದು, ಪೈಪ್ ಕಾಂಪೋಸ್ಟಿಂಗ್ ಬಳಸಿ ಶಾಲಾವರಣದಲ್ಲಿ ಹಸಿ ತ್ಯಾಜ್ಯ ನಿರ್ವಹಣೆ ಮಾಡಲಾಗುವುದು ಎಂದು ಸಚಿವರು ವಿವರಿಸಿದರು.

ನ್ಯಾಪ್ಕಿನ್ ಇನ್ಸಿನರೇಟರ್ ಯಂತ್ರ ಅಳವಡಿಕೆ
ಶಾಲೆಗಳಲ್ಲಿ ಇಂಗು ಗುಂಡಿ ನಿರ್ಮಾಣ ಮಾಡಲಾಗುವುದು. ಹಿತ್ತಲ ಕೈದೋಟಗಳ ನಿರ್ವಹಣೆ ವ್ಯವಸ್ಥೆ ಕೈಗೊಳ್ಳಲಾಗುವುದು. ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತು ಶಾಲಾ ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸುವುದರೊಂದಿಗೆ ಶಾಲೆಗಳ ಸಮೀಪ ಮತ್ತು ಆಯ್ದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಯೋಗಾತ್ಮಕವಾಗಿ ನ್ಯಾಪ್ಕಿನ್ ಇನ್ಸಿನರೇಟರ್ ಯಂತ್ರಗಳನ್ನು  ಆರ್.ಡಿ.ಪಿ.ಆರ್ ಇಲಾಖೆಯ ಸಹಕಾರದ ಮೂಲಕ ಅಳವಡಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.
ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಶಾಲೆಗಳ ಅಭಿವೃದ್ಧಿಗೆ ಶಾಲಾ ಶೌಚಾಲಯ ನಿರ್ಮಾಣ, ಶಾಲಾ ಅಡುಗೆ ಕೋಣೆ, ಶಾಲಾ ಕಾಂಪೌಂಡ್ ನಿರ್ಮಾಣ, ಶಾಲೆಗಳಲ್ಲಿ ಮಳೆಕೊಯ್ಲು ವ್ಯವಸ್ಥೆ, ಶಾಲಾ ಆಟದ ಮೈದಾನ ಮತ್ತು ಶಾಲಾ ಪೌಷ್ಠಿಕ ಕೈದೋಟಗಳನ್ನು ನಿರ್ಮಾಣ ಮಾಡಲಾಗುವುದು. ಶಾಲಾ ಪೌಷ್ಠಿಕ ಕೈದೋಟದ ಉತ್ಪನ್ನಗಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಿಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು.

ಶೌಚಾಲಯ- ಮೂತ್ರಾಲಯ ನಿರ್ಮಾಣ
ಪ್ರತಿ ಶಾಲೆಗಳಲ್ಲಿ ಅಂದಾಜು 4.30 ಲಕ್ಷ ರೂ. ವೆಚ್ಚದಲ್ಲಿ 270 ಚದುರ ಅಡಿಗಳಲ್ಲಿ ವಿದ್ಯಾರ್ಥಿನಿಯರಿಗೆ ಮೂರು ಶೌಚಾಲಯ, ವಿದ್ಯಾರ್ಥಿಗಳಿಗೆ ಒಂದು ಶೌಚಾಲಯ ಮತ್ತು ಎರಡು ಮೂತ್ರಾಲಯಗಳನ್ನು ನಿರ್ಮಿಸಲಾಗುವುದು. ಇದರಲ್ಲಿ ಒಂದು ಸೆಪ್ಟಿಕ್ ಟ್ಯಾಂಕ್, 1000 ಲೀಟರ್ ನ ಓವರ್ ಹೆಡ್ ಟ್ಯಾಂಕ್ ನ್ನು ಒಳಗೊಳ್ಳಲಿದೆ  ಎಂದರು.

ಶಾಲಾ ಅಡುಗೆ ಕೋಣೆ, ಕಾಂಪೌಂಡ್ ನಿರ್ಮಾಣ
500 ಮಕ್ಕಳಿರುವ ಶಾಲೆಗಳಿಗೆ ಅಂದಾಜು 6.20 ಲಕ್ಷ ರೂ. ವೆಚ್ಚದಲ್ಲಿ 390 ಚದುರ ಅಡಿ ವಿಸ್ತೀರ್ಣದಲ್ಲಿ ಶಾಲಾ ಅಡುಗೆ ಕೋಣೆ ನಿರ್ಮಿಸಲಾಗುವುದು. ಇದರ ಪೂರ್ಣ ಮೊತ್ತ ಭರಿಸಲು ನರೇಗಾದಲ್ಲಿ ಅವಕಾಶವಿಲ್ಲವಾದ್ದರಿಂದ 15ನೇ ಹಣಕಾಸು ಯೋಜನೆ ಮೂಲಕ ಆರ್.ಡಿ.ಪಿ.ಆರ್ ಇಲಾಖೆ ಅನುದಾನ ಒಗ್ಗೂಡಿಸಲಿದೆ ಎಂದು ಸಚಿವರು ವಿವರಿಸಿದರು. 2020-21ನೇ ಸಾಲಿನಲ್ಲಿ 29 ಜಿಲ್ಲೆಗಳ  1222 ಶಾಲೆಗಳಿಗೆ 2700.36 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ನರೇಗಾ ಯೋಜನೆಯಡಿ ಶಾಲೆಗಳಿಗೆ ಖೋಖೋ, ಕಬಡ್ಡಿ, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ರನ್ನಿಂಗ್ ಟ್ರ್ಯಾಕ್ ಸೇರಿದಂತೆ ಶಾಲಾ ಆಟದ ಮೈದಾನಗಳನ್ನು ನಿರ್ಮಿಸಲಾಗುವುದು ಎಂದು ಅವರು ವಿವರಿಸಿದರು.

ಮಳೆ ಕೊಯ್ಲು ಘಟಕ- ಪೌಷ್ಠಿಕ ಕೈದೋಟ ನಿರ್ಮಾಣ
ಸರ್ಕಾರಿ ಶಾಲೆಗಳಲ್ಲಿ 1.40 ಲಕ್ಷ ರೂ. ವೆಚ್ಚದಲ್ಲಿ 25,000 ಲೀಟರ್ ಮಳೆ ನೀರು ಸಂಗ್ರಹಿಸಲು ಮಳೆಕೊಯ್ಲು ಘಟಕ ನಿರ್ಮಾಣ ಮಾಡಲಾಗುವುದು. ಮಳೆ ಪ್ರಮಾಣ ಮತ್ತು ಕಟ್ಟಡದ ವಿಸ್ತೀರ್ಣದ ಮೇರೆಗೆ ವಿನ್ಯಾಸ ಬದಲಾಯಿಸಿಕೊಳ್ಳಲು ಅವಕಾಶವಿದೆ ಎಂದು ಸುರೇಶ್ ಕುಮಾರ್  ವಿವರಿಸಿದರು.
ಶಾಲಾ ಪೌಷ್ಠಿಕ ಕೈತೋಟಗಳ ನಿರ್ಮಾಣ ಸ್ಕೀಂನಡಿ  1000 ಚದುರ ಮೀಟರ್ ವಿಸ್ತೀರ್ಣಕ್ಕೆ 0.37 ಲಕ್ಷ ರೂ., 500 ಚಮೀಗೆ 0.25 ಲಕ್ಷ ರೂ., 250 ಚಮೀಗೆ 0.19 ಲಕ್ಷ ರೂ. ಮತ್ತು 100 ಚಮೀ ವಿಸ್ತೀರ್ಣದ ಕೈತೋಟ ನಿರ್ಮಾಣಕ್ಕೆ 0.13 ಲಕ್ಷ ರೂ. ವೆಚ್ಚ ಮಾಡಲಾಗುವುದು ಎಂದು ಸಚಿವರು  ವಿವರಿಸಿದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

RDPR ನೆರವು ಶ್ಲಾಘನೀಯ, ಸಚಿವ ಈಶ್ವರಪ್ಪ ಅವರಿಗೆ ಕೃತಜ್ಞತೆ
ರಾಜ್ಯದ ಇಂದಿನ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಮ್ಮ ಶಾಲೆಗಳ ಸಮಗ್ರ ಕಾಯಕಲ್ಪಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚಿನ ಸಹಕಾರವನ್ನು ಪಡೆಯಲು ನಾವು ಉದ್ದೇಶಿಸಿದ್ದೇವೆ. ಅವಶ್ಯವಿರುವ ಹೆಚ್ಚಿನ ಸಂಖ್ಯೆಯ ಶಾಲಾ ಶೌಚಾಲಯ ನಿರ್ಮಾಣ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ಅವರ ಹೆಚ್ಚಿನ ಸಹಕಾರ ಯಾಚಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಶಾಲೆಗಳ ಅಭಿವೃದ್ಧಿಗೆ ನೆರವಿನ ಹಸ್ತ ಚಾಚಿದ ಆರ್.ಡಿ.ಪಿ.ಆರ್ ಇಲಾಖೆಯ ನೆರವು ಶ್ಲಾಘನೀಯವಾಗಿದೆ ಎಂದು ತಿಳಿಸಿರುವ ಸಚಿವ ಸುರೇಶ್ ಕುಮಾರ್, ಗ್ರಾಮೀಣಾಭಿವೃದ್ಧಿ  ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಕೃತಜ್ಞತೆ ಸಲ್ಲಿಸಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: EDUCATION MINISTERkarnatakaMovementRural governament Schoolssuresh kumarSustainable Development
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram