ಉಡುಪಿ : ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಉಡುಪಿ ಜಿಲ್ಲೆಯಾದ್ಯಂತ ಕಳೆದ 5-6 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನರು ಹೈರಾಣಾಗಿದ್ದಾರೆ. ಭಾರೀ ಮಳೆಗೆ ಸುವರ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಹರಿಕಂಡಿಗೆ ವ್ಯಾಪ್ತಿಯ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಇತ್ತ ಮಾಣೈ ಸೇತುವೆ ಬಳಿ ಸುವರ್ಣ ನದಿ ನೀರು ಉಕ್ಕಿ ಹರಿಯುತ್ತಿದೆ. ಪರಿಣಾಮ ಹಿರಿಯಡ್ಕ- ಹರಿಕಂಡಿಗೆ ರಸ್ತೆಯ ತುಂಬೆಲ್ಲ ಮಳೆ ನೀರು ನಿಂತು ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರು ಪರದಾಡುವಂತಾಗಿದೆ.
ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...








