ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇನ್ಮುಂದೆ ರೈತನ ಬಳಿಯೂ ಇರಲಿದೆ “ಸ್ವಾಭಿಮಾನಿ ರೈತ” ಗುರುತಿನ ಚೀಟಿ..!

Kariyappa N by Kariyappa N
January 8, 2021
in Newsbeat, Politics, Samagra karnataka, ರಾಜ್ಯ
id card
Share on FacebookShare on TwitterShare on WhatsappShare on Telegram

ಬೆಂಗಳೂರು: ದೇಶಕ್ಕೆ ಅನ್ನ ನೀಡುವ ಅನ್ನದಾತ ಸ್ವಾಭಿಮಾನಿಯೂ ಕೂಡ ಆಗಿದ್ದಾನೆ. ಐಟಿ ಬಿಟಿ, ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಳಿ ಗುರುತಿನ ಚೀಟಿಯಿರುತ್ತದೆ. ಇಂತಹ ಗುರುತಿನ ಚೀಟಿಯೇ ಇಂತಹ ವ್ಯಕ್ತಿ ಇಂತಲ್ಲಿ ಕೆಲಸ ಮಾಡುತ್ತಾನೆ. ಅವನ ವಿಳಾಸ ಇಂತಹದು ಎಂದು ಹೇಳಿ ಬಿಡುತ್ತದೆ.

 

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಆದರೆ ಹೊಟ್ಟೆಗೆ ಅನ್ನ ನೀಡುವ ಜೀವದಾತನ ಬಳಿ ಇಂತಹ ಗುರುತಿನ ಚೀಟಿ ಇರದಿದ್ದರೆ ಹೇಗೆ? ಅಲ್ಲವೇ, ಹೌದು, ಈ ಪ್ರಶ್ನೆಗೆ ಈಗ ಉತ್ತರವೂ ದೊರಕಿದೆ.
ಅಂದ ಹಾಗೆ, ಕೃಷಿ ಇಲಾಖೆ ರೈತ ತಾನೊಬ್ಬ ಸ್ವಾಭಿಮಾನಿ ರೈತ ಎಂದು ಎದೆಯುಬ್ಬಿಸಿ ಹೇಳುವಂತಹ “ಸ್ವಾಭಿಮಾನಿ ರೈತ” ಹೆಸರಿನ ಗುರುತಿನ ಚೀಟಿಯನ್ನು ರೈತರಿಗೆ ನೀಡಲು ಸಜ್ಜಾಗಿದೆ.


ನಾಳೆ(ಜ.9ರಂದು) ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಮ್ಮ ಉಸ್ತುವಾರಿ ಜಿಲ್ಲೆ ಕೊಪ್ಪಳದಿಂದಲೇ ರೈತರಿಗೆ “ಸ್ವಾಭಿಮಾನಿ ರೈತ” ಎನ್ನುವ ಗುರುತಿನ ಚೀಟಿ ವಿತರಣೆಗೆ ಚಾಲನೆ ನೀಡುತ್ತಿದ್ದಾರೆ.
ತಂತ್ರಾಂಶದಲ್ಲಿ ನೋಂದಾಯಿಸಲ್ಪಟ್ಟಿರುವ ರೈತರಿಗೆ ಸ್ವಾಭಿಮಾನಿ ರೈತರ ಗುರುತಿನ ಚೀಟಿ ನೀಡಲಾಗುತ್ತಿದೆ.

“ಸ್ವಾಭಿಮಾನಿ ರೈತ” ಗುರುತಿನ ಚೀಟಿ ಎಂದರೇನು?
ರಾಜ್ಯದ ಇ-ಆಡಳಿತ ಇಲಾಖೆಯು ಎನ್.ಐ.ಸಿ ಮೂಲಕ ರಾಜ್ಯದ ರೈತರ ವಿವರಗಳನ್ನು ದಾಖಲಿಸಲು Fruits ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದೆ. ಪ್ರತಿಯೊಬ್ಬ ರೈತರಿಗೆ ಒಂದು ಪ್ರತ್ಯೇಕ ಗುರುತಿನ ಸಂಖ್ಯೆಯನ್ನು ನೀಡುವುದು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿಯ ಉದ್ದೇಶವಾಗಿದೆ. ಸದರಿ ಗುರುತಿನ ಸಂಖ್ಯೆಯ ಆಧಾರದಲ್ಲಿ ರೈತರು Fruits ತಂತ್ರಾಂಶ ಬಳಸುವ ಎಲ್ಲಾ ಇಲಾಖೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿರುತ್ತದೆ.

ಗುರುತಿನ ಚೀಟಿ ವ್ಯಾಪ್ತಿ..
ಕೃಷಿ ಇಲಾಖೆ
ತೋಟಗಾರಿಕೆ ಇಲಾಖೆ
ರೇಷ್ಮೆ ಇಲಾಖೆ
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆ
ರೈತರು ಪಡೆಯುವ ಈ ಎಲ್ಲಾ ಇಲಾಖೆಗಳ ಸೌಲಭ್ಯಗಳು ಅವರ ಗುರುತಿನ ಸಂಖ್ಯೆಗೆ ಎದುರಾಗಿ ದಾಖಲಾಗುತ್ತದೆ. Fruits ತಂತ್ರಾಂಶದಲ್ಲಿ ರೈತರ ನೋಂದಣಿಯು ಜೂನ್ 2018 ರಿಂದ ಪ್ರಾರಂಭವಾಗಿದೆ . ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳಲ್ಲಿ ರೈತರನ್ನು Fruits ತಂತ್ರಾಂಶದಲ್ಲಿ ನೋಂದಾಯಿಸಲಾಗುತ್ತಿದೆ. Fruits ತಂತ್ರಾಂಶದಲ್ಲಿ ರೈತರ ನೋಂದಾಣಿಗಾಗಿ ರೈತರ ಗುರುತು, ವಿಳಾಸ, ಭೂ ಹಿಡುವಳಿ, ಆಧಾರ್ ಗುರುತಿನ ಸಂಖ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಈ ಎಲ್ಲಾ ಮಾಹಿತಿಯನ್ನು Fruits ನೋಂದಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡಲು ಪ್ರಸ್ತಾಪಿಸಲಾಗಿದೆ.

ಹಿನ್ನಲೆ : . ಫ್ರೂಟ್ಸ್ ತಂತ್ರಾಂಶವನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳಲ್ಲಿ ಒಂದು ಬಾರಿ ಮಾತ್ರ ರೈತರ ನೋಂದಣಿ ಮಾಡಲು ಅಭಿವೃದ್ಧಿ ಪಡಿಸಲಾಗಿದೆ.
ಈ ತಂತ್ರಾಂಶದಲ್ಲಿ ಆಧಾರ್ ಕಾರ್ಡ್, ಪಹಣಿ (RTC), ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ವಿವರ, photo ಇತ್ಯಾದಿ ದಾಖಲಾತಿಗಳನ್ನು ಪರಿಶೀಲಿಸಿ ರೈತರ ನೋಂದಣಿ ಮಾಡಲಾಗುತ್ತದೆ. ರೈತರ ಹಿಡುವಳಿ ವಿವರವನ್ನು ಕಂದಾಯ ಇಲಾಖೆಯ `ಭೂಮಿ’ ತಂತ್ರಾಂಶದಿಂದ ಪಡೆಯಲಾಗುತ್ತದೆ.

PM Kisan 7th instalment
ಪ್ರತಿ ನೋಂದಾಯಿತ ರೈತರಿಗೂ ಪ್ರತ್ಯೇಕ ನೋಂದಣಿ ಸಂಖ್ಯೆ ನೀಡಲಾಗುತ್ತದೆ ಹಾಗೂ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ. ಇಲ್ಲಿಯವರೆಗೆ ರೈತರಿಗೆ ನೋಂದಣಿಯಾದ ನಂತರ ನೀಡಲು ಯಾವುದೇ ನಿರ್ದಿಷ್ಟ ಸ್ವೀಕೃತಿ / ದಾಖಲೆ ಪತ್ರವನ್ನು ನಿಗದಿಪಡಿಸಿರುವುದಿಲ್ಲ. ಯಾವುದೇ ದಾಖಲಾತಿಗಳು ಇಲ್ಲದೆ ನಂತರದ ದಿನಗಳಲ್ಲಿ ಇಲಾಖೆಗಳನ್ನು ಸೌಲಭ್ಯಗಳಿಗಾಗಿ ಸಂಪರ್ಕಿಸಿದಾಗ ನೋಂದಣಿ ಸಂಖ್ಯೆಯನ್ನು ರೈತರು ಬರೆದಿಟ್ಟುಕೊಂಡು, ನೆನಪಿನಲ್ಲಿಟ್ಟುಕೊಂಡು ಸರಿಯಾದ ಸಂಖ್ಯೆಯನ್ನು ನೀಡುವುದು ಕಷ್ಟ ಸಾಧ್ಯವಾಗುತ್ತದೆ. ಈ ಅನಾನುಕೂಲತೆಯನ್ನು ಪರಿಹರಿಸಲು, ವಿವಿಧ ದಾಖಲಾತಿಗಳನ್ನು , ಭೂ ಹಿಡುವಳಿ ವಿವರಗಳನ್ನು ಪರಿಶೀಲಿಸಿ ನೋಂದಾಯಿಸಿದ ರೈತರಿಗೆ Fruits ನೋಂದಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡಲು ಪ್ರಸ್ತಾಪಿಸಲಾಗಿದೆ.

ಗುರುತಿನ ಚೀಟಿಯಿಂದೇನು ಲಾಭ?
ಇದರಿಂದ ರೈತರು ಬೆಳೆ ಸಾಲ, ಪಿಎಂ ಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಚೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು ಹಾಗೂ ರೈತರಿಗೆ ಇದು ಒಂದು ವ್ಯವಹಾರಿಕ ಗುರುತಿನ ಚೀಟಿಯಾಗುತ್ತದೆ.

ಯೋಜನೆಯ ಉದ್ದೇಶಗಳೇನು?
ವಿವಿಧ ದಾಖಲಾತಿಗಳನ್ನು ಭೂ ಹಿಡುವಳಿ ವಿವರಗಳನ್ನು ಪರಿಶೀಲಿಸಿ ರೈತರಿಗೆ Fruits ನೋಂದಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡುವುದರಿಂದ ರೈತರು ಬೆಳೆಸಾಲ, ಪಿಎಂಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಛೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು ಹಾಗೂ ರೈತರಿಗೆ ಇದು ಒಂದು ವ್ಯಾವಹಾರಿಕ ಗುರುತಿನ ಚೀಟಿಯಾಗುತ್ತದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಈಗಾಗಲೇ “ಕೃಷಿ ಸಂಜೀವಿನಿ” ಸಸ್ಯ ಚಿಕಿತ್ಸಾ ಸಂಚಾರಿ ವಾಹನಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದ್ದಾರೆ. ನಾಳೆ(ಶನಿವಾರ) ಸಹ ಕೊಪ್ಪಳಕ್ಕಾಗಿ ವಿಶೇಷವಾಗಿ 20 ಕೃಷಿ ಸಂಜೀವಿನಿ ವಾಹನಗಳನ್ನು ಪ್ರತ್ಯೇಕವಾಗಿ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಇದೇ ವೇಳೆ ಸ್ವಾಭಿಮಾನಿ ರೈತ ಗುರುತಿನ ಚೀಟಿಯನ್ನೂ ಸಹ ಲೋಕಾರ್ಪಣೆಗೊಳಿಸುತ್ತಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: "Swabhimani farmer"B C Patilidentification cardkarnataka farmers
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram