ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಬೆನ್ನಿಗೆ ನಾವಿದ್ದೇವೆ ಎಂದು ಸ್ವಾಮೀಜಿಗಳು ಹೇಳಿದ್ದಾರೆ.
ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಕೂಡ ಸಿಎಂ ಬೆನ್ನಿಗೆ ನಿಂತಿದೆ. ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟದ ಸ್ವಾಮೀಜಿಗಳು ಸಿಎಂ ಅವರನ್ನು ಭೇಟಿ ಮಾಡಿ ನೈತಿಕ ಬೆಂಬಲ ಘೋಷಿಸಿದರು. ಸಿಎಂ ಅವರನ್ನು ಭೇಟಿಯಾದ 10 ಸ್ವಾಮೀಜಿಗಳನ್ನೊಳಗೊಂಡ ನಿಯೋಗ ಸಿದ್ದರಾಮಯ್ಯ ಅವರಿಗೆ ಆತ್ಮಸ್ಥೈರ್ಯ ತುಂಬಿತು. ಈ ವೇಳೆ ರಾಜ್ಯಪಾಲರ ನಡೆಯನ್ನು ಖಂಡಿಸಿತು.
ಇನ್ನೊಂದೆಡೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ಇದೇ ಆಗಸ್ಟ್ 27ರಂದು ರಾಜ ಭವನ ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.