ಜೈಪುರ : ಕೈ ಕಾಲು, ಬಾಯಿ ಕಟ್ಟಿದ ಸ್ಥಿತಿಯಲ್ಲಿ ಸ್ವಾಮೀಜಿಯೊಬ್ಬರ (Swamiji) ಮೃತದೇಹ ಪತ್ತೆಯಾಗಿರುವ ಘಟನೆ ರಾಜಸ್ಥಾನದ (Rajasthan) ಕುಚಾಮನ್ (Kuchaman) ಜಿಲ್ಲೆಯಲ್ಲಿ ನಡೆದಿದೆ.
ಮುನಿಯನ್ನು ಮೋಹನ್ ದಾಸ್ (72) ಎಂಬುವವರ ಮೃತದೇಹವೇ ಪತ್ತೆಯಾಗಿದ್ದು, ಇವರು 15 ವರ್ಷಗಳಿಂದ ರಾಸಲ್ (Rasal) ಗ್ರಾಮದಲ್ಲಿ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ ಗ್ರಾಮಸ್ಥರಿಗೆ ಮೃತದೇಹ ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ವಾಮೀಜಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿದ ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ. ಭಾನುವಾರ ಸಂಜೆ ಗ್ರಾಮಸ್ಥರೊಂದಿಗೆ ಮಾತನಾಡಿದ್ದ ಸ್ವಾಮೀಜಿ, ಮಲಗಲು ತಮ್ಮ ಕೋಣೆಗೆ ತೆರಳಿದ್ದರು. ಆದರೆ, ಬೆಳಿಗ್ಗೆ ಅವರ ಮೃತದೇಹ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ








