ಟಿ-20 ವಿಶ್ವಕಪ್ : ನ್ಯೂಜಿಲ್ಯಾಂಡ್ ತಂಡ ಪ್ರಕಟ New Zealand saaksha tv
ವೆಲ್ಲಿಂಗ್ಟನ್ : ಚುಟುಕು ಕ್ರಿಕೆಟ್ ನ ಮಹಾ ಸಂಗ್ರಾಮಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ತಂಡ ಸಜ್ಜಾಗಿದೆ. ಯುಎಇನಲ್ಲಿ ಬಿಸಿಸಿಐ ಆಶ್ರಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಮೂರು ತಿಂಗಳ ಮೊದಲೇ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ 16 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ.
ಅಕ್ಟೋಬರ್ 17ರಿಂದ ಟಿ20 ವಿಶ್ವಕಪ್ ಆರಂಭವಾಗಲಿದ್ದು, ನ್ಯೂಜಿಲ್ಯಾಂಡ್ ತಂಡ ಅಕ್ಟೋಬರ್ 26ರಂದು ಬಿ ಗುಂಪಿನ ಕ್ವಾಲಿಫೈಯರ್ 1 ತಂಡದ ವಿರುದ್ಧ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.
ತಂಡ ಹೀಗಿದೆ
ಕೇನ್ ವಿಲಿಯಮ್ಸನ್, ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫಗ್ರ್ಯುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೆಮೀಸನ್, ಡೆರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋದಿ,ü ಟಿಮ್ ಸೌಥಿ, ಆಡಮ್ ಮಿಲ್ನೆ









