T20 Wold cup | ಅವ್ರು ಟೀಂ ಇಂಡಿಯಾದಲ್ಲಿರಬೇಕು : ಕುಲ್ಚಾ ಬಗ್ಗೆ ಹರ್ಭಜನ್ ಮೆಚ್ಚುಗೆ
ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್‌ಗಳಾದ ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಚಹಾಲ್ 10 ಪಂದ್ಯಗಳಲ್ಲಿ 19 ವಿಕೆಟ್ ಕಬಳಿಸಿದ್ದು, ಪರ್ಪಲ್ ಕ್ಯಾಪ್ ಹೋಲ್ಡರ್ ಆಗಿದ್ದಾರೆ.
ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಕುಲದೀಪ್ ಯಾದವ್ 18 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ರೇಸ್ ನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಹೀಗಾಗಿ ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಭಾರತ ತಂಡಕ್ಕೆ ಯುವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಅವರನ್ನು ಆಯ್ಕೆ ಮಾಡುವಂತೆ ಭಾರತದ ಮಾಜಿ ನಾಯಕ ಹರ್ಭಜನ್ ಸಿಂಗ್ ಸಲಹೆ ನೀಡಿದ್ದಾರೆ.
ಕೆಲ ಕಾಲ ಟೀಂ ಇಂಡಿಯಾದಲ್ಲಿ ಮಿಂಚಿದ್ದ ಈ ಉಭಯರು 2019ರ ವಿಶ್ವಕಪ್ ಬಳಿಕ ಫಾರ್ಮ್ ಕಳೆದುಕೊಂಡಿದ್ದರು. ಹೀಗಾಗಿ ಟಿ-20 ವಿಶ್ವಕಪ್ ಗೆ ಅವರನ್ನ ಕಡೆಗಣಿಸಿಲಾಯ್ತು.
ಆದರೆ ಈಗ ‘ಕುಲ್-ಚಾ’ ಜೋಡಿ ಫಾರ್ಮ್‌ಗೆ ಮರಳಿದ್ದಾರೆ. ಹೀಗಾಗಿ ಅವರನ್ನ ಮತ್ತೆ ಟೀಂ ಇಂಡಿಯಾಗೆ ಆಯ್ಕೆ ಮಾಡಬೇಕು ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಅವರಿಬ್ಬರು ಭಾರತಕ್ಕಾಗಿ ಒಟ್ಟಿಗೆ ಆಡಿದಾಗ .. ಅವರು ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆಯುತ್ತಿದ್ದರು. ಅವರು T20 ಮತ್ತು ODIಗಳಲ್ಲಿ ಭಾರತ ತಂಡಕ್ಕಾಗಿ ಅನೇಕ ಜಯಗಳನ್ನ ತಂದುಕೊಟ್ಟಿದ್ದಾರೆ.
ಹಾಗಾಗಿ ಇಬ್ಬರೂ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಬೇಕು ಎಂದು ಹರ್ಭಜನ್ ಹೇಳಿದ್ದಾರೆ.
t20-wold-cup-harbhajan-singh-bats-chahal-and-kuldeep