ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T 20 world cup 2022 | ಅಶ್ವಿನ್ ಗೆ ಸಿಗಲ್ಲ ಆಸ್ಟ್ರೇಲಿಯಾ ಟಿಕೆಟ್

Mahesh M Dhandu by Mahesh M Dhandu
August 8, 2022
in Newsbeat, Sports, ಕ್ರೀಡೆ
ravichandran ashwin

ravichandran ashwin

Share on FacebookShare on TwitterShare on WhatsappShare on Telegram

T 20 world cup 2022 | ಅಶ್ವಿನ್ ಗೆ ಸಿಗಲ್ಲ ಆಸ್ಟ್ರೇಲಿಯಾ ಟಿಕೆಟ್

ಬರೋಬ್ಬರಿ ಎಂಟು ತಿಂಗಳ ಬಳಿಕ ಭಾರತ ಟಿ 20 ತಂಡಕ್ಕೆ ವಾಪಸ್ ಆಗಿರುವ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಟಿ 20 ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ನೀಡಿದರು.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಅಶ್ವಿನ್ ನವೆಂಬರ್ 2021ರಂದು ಕೊನೆಯ ಟಿ 20 ಪಂದ್ಯವನ್ನಾಡಿದ್ದರು. ಅಲ್ಲದೇ ವಿಂಡೀಸ್ ವಿರುದ್ದದ ಮೊದಲ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾ ಮೂವರು ಸ್ಪಿನ್ನರ್ ಗಳೊಂದಿಗೆ ಅಖಾಡಕ್ಕೆ ಇಳಿಯುತ್ತದೆ ಎಂದು ಯಾರೂ ಭಾವಿಸಿರಲಿಲ್ಲ.

ಅನೂಹ್ಯವಾಗಿ ಅಶ್ವಿನ್ ಗೆ ತಂಡದಲ್ಲಿ ಸ್ಥಾನ ದೊರೆಯಿತು. ಇನ್ನುಳಿದ ಸ್ಪಿನ್ನರ್ ಗಳೆಂದರೇ ರವೀಂದ್ರ ಜಡೇಜಾ, ರವಿ ಬಿಷ್ನೋಯಿ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಪಾರ್ಥಿವ್ ಪಟೇಲ್, ಆಸಕ್ತಿದಾಯಕ ಕಮೆಂಟ್ ಗಳನ್ನು ಮಾಡಿದ್ದಾರೆ.

ಆಸ್ಟ್ರೇಲಿಯಾ ವೇದಿಕೆಯಾಗಿ ನಡೆಯಲಿರುವ ಟಿ 20 ವಿಶ್ವಕಪ್ ನಲ್ಲೂ ಕೂಡ ಅಶ್ವಿನ್ ಗೆ ಅವಕಾಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.

T20 world cup 2022 Ashwin does not get Australia ticket saaksha tv
T20 world cup 2022 Ashwin does not get Australia ticket saaksha tv

ವಿಶ್ವಕಪ್ ನಲ್ಲಿ ಟೀಂ ಇಂಡಿಯಾದಲ್ಲಿ ಕುಲ್ ದೀಪ್ ಯಾದವ್, ರವಿ ಬಿಷ್ಣೋಯಿ, ಯಜುವೇಂದ್ರ ಚಹಾಲ್ ರಂತಹ ಸ್ಪಿನ್ನರ್ ಗಳು ಇರಬೇಕು ಅನ್ನೋದು ನನ್ನ ಅಭಿಪ್ರಾಯವಾಗಿದೆ.

ಈ ಮಣಿಕಟ್ಟು ಸ್ಪಿನ್ನರ್ ಗಳಿಗೆ ಮಿಡಲ್ ಆಫ್ ದಿ ಮ್ಯಾಚ್ ನಲ್ಲಿ ವಿಕೆಟ್ ತೆಗೆಯುವ ಸಾಮರ್ಥ್ಯವಿದೆ. ಅಶ್ವಿನ್ ಮಾತ್ರ ಟಿ 20 ಕ್ರಿಕೆಟ್ ನಲ್ಲಿ ಅಷ್ಟಾಗಿ ಮಿಂಚಿಲ್ಲ ಎಂದಿದ್ದಾರೆ.

ಇನ್ನು ಮೊದಲ ಟಿ 20 ಪಂದ್ಯದಲ್ಲಿ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರನ್ನ ಪಾರ್ಥಿವ್ ಪಟೇಲ್ ಪ್ರಶಂಸಿದ್ದಾರೆ.

ಸ್ವದೇಶದಲ್ಲೂ ಕೂಡ ಮೂವರು ಸ್ಪಿನ್ನರ್ ಗಳೊಂದಿಗೆ ಟಿ 20 ಪಂದ್ಯವನ್ನಾಡಿದ್ದು ನಾನು ನೋಡೇ ಇಲ್ಲ. ವಿಂಡೀಸ್ ಪ್ರವಾಸದಲ್ಲಿ ಭಾರತ ತಂಡ ಅದ್ಬುತವಾಗಿ ಆಡುತ್ತಿದೆ. ಸ್ಪಿನ್ನರ್ ಗಳನ್ನು ರೋಹಿತ್ ಶರ್ಮಾ ಚೆನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ಟೀಂ ಇಂಡಿಯಾದಲ್ಲಿ ಸ್ಪಿನ್ನರ್ ಗಳ ನಡುವೆ ಭಾರಿ ಪೈಪೋಟಿ ಶುರುವಾಗಿದೆ. ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್, ಕುಲ್ ದೀಪ್ ಯಾದವ್, ಆರ್ ಅಶ್ವಿನ್, ರವಿ ಬಿಷ್ನೋಯ್ ನಡುವೆ ಸ್ಥಾನಕ್ಕಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.

ಇದರ ನಡುವೆ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ಸ್ಪಿನ್ ಬೌಲರ್ ಆಗಿದ್ದಾರೆ. ಹೀಗಾಗಿ ತಂಡದಲ್ಲಿ ಒಬ್ಬ ಸ್ಪೆಷಲಿಸ್ಟ್ ಸ್ಪಿನ್ನರ್ ಗೆ ಮಾತ್ರ ಅವಕಾಶ ಸಿಗಲಿದೆ.

Tags: #Saaksha TVCricketRavichandran AshwinT 20 world cup 2022
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram