T20 world cup | ಪ್ಲೇಯಿಂಗ್ 11 ನಲ್ಲಿ ಡಿಕೆ, ಪಂತ್ ಇರಬೇಕಾ ?
ಟಿ 20 ವರ್ಲ್ಡ್ ಕಪ್ ಭಾಗವಾಗಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಚರ್ಚೆ ಎಲ್ಲೆಡೆ ಶುರುವಾಗಿದೆ.
ಈ ಸಂಬಂಧ ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದು, ಟೀಂ ಇಂಡಿಯಾದ ಪ್ಲೇಯಿಂಗ್ ನಲ್ಲಿ ರಿಷಬ್ ಪಂತ್, ದಿನೇಶ್ ಕಾರ್ತಿಕ್ ಇಬ್ಬರೂ ಇರಬೇಕು ಎಂದಿದ್ದಾರೆ.
ಇವರಲ್ಲಿ ಪಂತ್ ಅವರು ಆರನೇ ಸ್ಥಾನದಲ್ಲಿ, ದಿನೇಶ್ ಕಾರ್ತಿಕ್ ಏಳನೇ ಸ್ಥಾನದಲ್ಲಿ ಆಡಿಸಬೇಕು ಎಂದಿದ್ದಾರೆ ಸುನಿಲ್ ಗವಾಸ್ಕರ್.
ಅಂದಹಾಗೆ ಟೀಂ ಇಂಡಿಯಾದ ಪ್ಲೇಯಿಂಗ್ ನಲ್ಲಿ ರಿಷಬ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಯಾರಿಗೆ ಅವಕಾಶ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
ಯಾಕಂದರೆ ಇಬ್ಬರೂ ವಿಕೆಟ್ ಕೀಪರ್ ಗಳಾಗಿದ್ದು ಫಿನಿಷರ್ ಗಳಾಗಿದ್ದಾರೆ. ಹೀಗಾಗಿ ತಂಡದಲ್ಲಿ ಯಾರನ್ನ ಆಡಿಸಬೇಕು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಕೆಲವರು ರಿಷಬ್ ಪಂತ್ ಅವರನ್ನು ಪ್ಲೇಯಿಂಗ್ ಇಲೆವೆನ್ ಗೆ ತರಬೇಕು ಎಂದು ವಾದಿಸುತ್ತಿದ್ದಾರೆ.
ಇನ್ನೂ ಕೆಲವರು ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಬೇಕು ಎನ್ನುತ್ತಿದ್ದಾರೆ. ಆದ್ರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮಾತ್ರ ದಿನೇಶ್ ಕಾರ್ತಿಕ್ ಮೇಲೆ ಹೆಚ್ಚು ನಂಬಿಕೆಯನ್ನು ಇಟ್ಟುಕೊಂಡಿದೆ.
ಇದೇ ಕಾರಣಕ್ಕಾಗಿಯೇ ದಿನೇಶ್ ಕಾರ್ತಿಕ್ ಗೆ ಹೆಚ್ಚು ಅವಕಾಶಗಳನ್ನು ನೀಡಲಾಗುತ್ತಿದೆ.
ಆದ್ರೆ ಸುನೀಲ್ ಗವಾಸ್ಕರ್ ಇಬ್ಬರಿಗೂ ಅವಕಾಶ ನೀಡಬೇಕು ಎಂದು ವಾದಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಅವರನ್ನು ಐದನೇ ಬೌಲರ್ ಆಗಿ ಬಳಿಸಿಕೊಂಡು ಪಂತ್ ಗೆ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ನೀಡಬೇಕು ಎಂದಿದ್ದಾರೆ.
ಪಂತ್ ಗೆ ಆಸ್ಟ್ರೆಲಿಯಾ ಪಿಚ್ ನಲ್ಲಿ ಒಳ್ಳೆಯ ಟ್ರ್ಯಾಕ್ ರೆಕಾರ್ಡ್ ಇದೆ. ಹಾಗೇ ದಿನೇಶ್ ಕಾರ್ತಿಕ್ ಅವರನ್ನ ಫಿನಿಷರ್ ಆಗಿ ಬಳಿಸಿಕೊಳ್ಳಬೇಕು ಎಂದಿದ್ದಾರೆ.
ಇನ್ನು ಪಾಕ್ ವಿರುದ್ದದ ಪಂದ್ಯಕ್ಕೆ ಗವಾಸ್ಕರ್ ಅವರ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಕೆ.ಎಲ್.ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅರ್ಷ್ ದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ.