ಮಹಿಳಯೆರ ಟಿ20 ವಿಶ್ವಕಪ್ ಗೆ ಇಂದಿನಿಂದ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಸ್ಕಾಟ್ಲೆಂಡ್ ತಂಡಗಳ ಮದ್ಯೆ ಪಂದ್ಯ ನಡೆಯಲಿದೆ. ಈ ಪಂದ್ಯ ಇಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಸಂಜೆ 7ಕ್ಕೆ ಮತ್ತೊಂದು ಪಂದ್ಯ ನಡೆಯಲಿದ್ದು, ಪಾಕಿಸ್ತಾನ್ ಹಾಗೂ ಶ್ರೀಲಂಕಾ ಮಧ್ಯೆ ಸೆಣಸಾಟ ನಡೆಯಲಿದೆ.
ಭಾರತ ತಂಡದ ಅಭಿಯಾನ ನಾಳೆಯಿಂದ ಆರಂಭವಾಗಲಿದೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಮೊದಲ ಪಂದ್ಯ ಆಡಲಿದೆ. ನಂತರ ಅ. 6ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ ಸೆಣಸಾಟ ನಡೆಸಲಿದೆ.
ಅಕ್ಟೋಬರ್ 9 ರಂದು ನಡೆಯಲಿರುವ ತನ್ನ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 13 ರಂದು ಆಸ್ಟ್ರೇಲಿಯಾ ಕಾದಾಟ ನಡೆಸಲಿದೆ. ಮಹಿಳಾ ಟಿ20 ವಿಶ್ವಕಪ್ ನ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ವೀಕ್ಷಿಸಬಹುದು.








