ಟಿ-20 ವಿಶ್ವಕಪ್ ಟೂರ್ನಿಯ ಎರಡನೇ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎಂಟು ವಿಕೆಟ್ ಗಳಿಂದ ಪರಾಭವಗೊಳಿಸಿದೆ.
ರೋಹಿತ್ ಶರ್ಮಾ ಮತ್ತು ಸೂರ್ಯ ಕುಮಾರ್ ಯಾದವ್ ಫಾರ್ಮ್ ಕಂಡುಕೊಂಡಿರುವುದು ಸಮಾಧಾನಕರ ಸಂಗತಿಯಾಗಿದೆ.
ಗೆಲ್ಲಲು 153 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಟೀಮ್ ಇಂಡಿಯಾ 17.5 ಓವರ್ ಗಳಲ್ಲಿ ಕೇವಲ ಎರಡು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದೆ. ಕೆ.ಎಲ್. ರಾಹುಲ್ ಆಕರ್ಷಕ 39 ರನ್ ಸಿಡಿಸಿದ್ರೆ, ರೋಹಿತ್ ಶರ್ಮಾ 60 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಸೇರಿಕೊಂಡ್ರು.
ನಂತರ ಸೂರ್ಯ ಕುಮಾರ್ ಯಾದವ್ ಅಜೇಯ 38 ರನ್ ಹಾಗೂ ಹಾರ್ದಿಕ್ ಪಾಂಡ್ಯ ಅಜೇಯ 14 ರನ್ ಸಿಡಿಸಿದ್ರು.
ಇದಕ್ಕು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತ್ತು.
ಆಸ್ಟ್ರೇಲಿಯಾ 11 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕ್ಕಿತ್ತು. ಆಗ ಸ್ಟೀವನ್ ಸ್ಮಿತ್ 57 ರನ್ ಹಾಗೂ ಗ್ಲೇನ್ ಮ್ಯಾಕ್ಸ್ ವೆಲ್ 37 ರನ್ ಮತ್ತು ಮಾರ್ಕಸ್ ಸ್ಟೋನಿಸ್ ಅಜೇಯ 41 ರನ್ ದಾಖಲಿಸಿದ್ರು.
IND vs ENG: 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ? ಪಿಚ್ Report ಏನ್ ಹೇಳುತ್ತೆ..?
ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ನಡೆಯಲಿದೆ. ಕಟಕ್ ಪಿಚ್ ವರದಿ ಈ ಪಂದ್ಯವು ಬಾರಾಬತಿ ಮೈದಾನದಲ್ಲಿ ನಡೆಯಲಿದೆ,...