2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕಾ
2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿಯಾಗಿರುವ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಆಡಳಿತ ಒಪ್ಪಿಗೆ ನೀಡಿದೆ. ರಾಣಾ ಹಸ್ತಾಂತರ ಕುರಿತ ಅರ್ಜಿಯ ವಿಚಾರಣೆ ನಡೆಸುತ್ತಿರುವ ಲಾಸ್ ಏಂಜಲೀಸ್‌ನ ಕೋರ್ಟ್‌ಗೆ ಈ ಮಾಹಿತಿ ನೀಡಲಾಗಿದೆ. ರಾಣಾ ಹಸ್ತಾಂತರ ಕೋರಿ ಅರ್ಜಿ ಸಲ್ಲಿಸಿರುವ ಭಾರತ, ಆತನ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಸಾಕಷ್ಟು ಸಾಕ್ಷ್ಯಗಳನ್ನು ಒದಗಿಸಿದೆ ಎಂದು ಕ್ಯಾಲಿಫೋರ್ನಿಯಾ ಸೆಂಟ್ರಲ್ ಡಿಸ್ಟ್ರಿಕ್ಟ್ ಆಡಳಿತವು ಕೋರ್ಟ್‌ಗೆ ಮಾಹಿತಿ ನೀಡಿದೆ.
ಕೊರೊನಾ ತವರಲ್ಲಿ ಹೊಸ ರೈಲು – ಗಂಟೆಗೆ 600 ಕಿ.ಮೀ ವೇಗದಲ್ಲಿ ಸಾಗುವ ಟ್ರೈನ್..!
ರಾಣಾನನ್ನು ತಲೆಮರೆಸಿಕೊಂಡಿರುವ ಆರೋಪಿ ಎಂದು ಘೋಷಿಸಿರುವ ಭಾರತ, ಆತನ ಹಸ್ತಾಂತರ ಕೋರಿ ಅಮೆರಿಕಕ್ಕೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಕಳೆದ ವರ್ಷ ಜೂನ್ 10ರಂದು ಲಾಸ್ ಏಂಜಲೀಸ್‌ನಲ್ಲಿ ಬಂಧಿಸಲಾಗಿದೆ. ಇದೀಗ 2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿಯಾಗಿರುವ ತನಾವ್ಟುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಆಡಳಿತ ಒಪ್ಪಿಗೆ ನೀಡಿದೆ.