ಕೊಪ್ಪಳ : ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ಒಬ್ಬ ಮಹಿಳಾ ಸಿಬ್ಬಂದಿಗೆ ಕಿಸ್ ಮಾಡಿರುವ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದ್ದು, ಈ ಹಿಂದೆ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಗುರುಬಸವರಾಜ್ ಅವರು ಕಿಸ್ ಮಾಡಿದ್ದಾರೆ ಎನ್ನುವ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದೆ.
ಸರ್ಕಾರಿ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ತಹಶೀಲ್ದಾರ್ ಕಿಸ್ ಮಾಡಿ ಕಚೇರಿಯ ಘನತೆಯನ್ನ ಮಣ್ಣು ಪಾಲು ಮಾಡಿದ್ದಾರೆ ಎಂದು ಕೆಲ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗುರುಬಸವರಾಜ್ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ವೈರಲ್ ಆಗಿದೆ. ಅಲ್ಲಿಂದ ವರ್ಗಾವಣೆಯಾಗಿ ಈಗ ಗುರುಬಸವರಾಜ್ ಸದ್ಯ ಕೊಪ್ಪಳ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿದ್ದು, ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.








