ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಚೀನಾ, ಪಾಕಿಸ್ತಾನಕ್ಕೆ ಆಹ್ವಾನ
ಸ್ಮಶಾಣದಂತಾಗಿರುವ ಅಫ್ಘಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್ ರಾಕ್ಷಸರ ಕೈ ಕೆಳಗೆ ಸಿಲುಕಿ ಜನರು ಕ್ಷಣಕ್ಷಣಕ್ಕೂ ಸಾಯುವಂತಾಗಿದೆ. ಅಫ್ಗಾನಿಸ್ತಾನದಲ್ಲಿ ತನ್ನ ಸೇನೆ ಹಿಂಪಡೆಯುವ ಅಮೆರಿಕಾ ನಿರ್ಧಾರದಿಂದಾಗಿ ಬಾಲ ಮುದುರಿಕೊಂಡು ಮೂಲೆಯಲ್ಲಿದ್ದ ತಾಲಿಬಾನಿಗಳು ಇಡಿ ಅಫ್ಗಾನ್ ದೇಶವನ್ನೇ ಸ್ಮಶಾಣ ಮಾಡಿ ಜನರಿಗೆ ನರಕ ದರ್ಶನ ಮಾಡಿಸುತ್ತಿದ್ದಾರೆ.. ಇನ್ನೂ ತಾಲಿಬಾನ್ ಅಫ್ಗಾನ್ ನಲ್ಲಿ ಸರ್ಕಾರ ರಚನೆಯ ಕಾರ್ಯದಲ್ಲಿ ತೊಡಗಿದೆ. ಸರ್ಕಾರ ರಚನೆ ಸಮಾರಂಭದಲ್ಲಿ ಉಗ್ರರ ತಾಯ್ನಾಡು ಪಾಕಿಸ್ತಾನ , ಚೈನಾವನ್ನೂ ಆಹ್ವಾನಿಸಿದೆ.
ಹೌದು ಅಫ್ಘಾನಿಸ್ತಾನದಲ್ಲಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಚೀನಾ , ಪಾಕಿಸ್ತಾನವನ್ನು ತಾಲಿಬಾನ್ ಉಗ್ರ ಸಂಘಟನೆ ಆಹ್ವಾನಿಸಿದೆ. ಪಂಜ ಶೀರ್ ಕಣಿವೆ ಪ್ರದೇಶವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಬೆನ್ನಲ್ಲೇ ತಾಲಿಬಾನ್ ಸರ್ಕಾರ ರಚನೆಗೆ ಅಂತಿಮ ತಯಾರಿ ನಡೆಸಿಕೊಂಡಿದೆ. ಅಧಿಕಾರ ಸ್ವೀಕಾರ ಸಮಾರಂಭಕ್ಕೆ ರಷ್ಯಾ, ಪಾಕಿಸ್ತಾನ, ಚೀನಾ,ಟರ್ಕಿ, ಇರಾನ್, ಕತಾರ್ ಗೆ ಆಹ್ವಾನ ನೀಡಿದೆ ಎನ್ನಲಾಗಿದೆ.