ತಮಿಳುನಾಡಿನಲ್ಲಿ ಕಳೆದ ವಾರ ವಿದ್ಯಾರ್ಥಿನಿ ಆತ್ಮಹತ್ಯೆಯ ಪ್ರಕರಣದಿಂದ ರಾಜ್ಯಾದ್ಯಂತ ಕಿಚ್ಚು ಹೊತ್ತಿಕೊಂಡಿತ್ತು. ಪ್ರತಿಭಟನೆಗಳು ನಡೆದು ತೀವ್ರ ಸ್ವರೂಪ ಪಡೆದುಕೊಂಡಿತ್ತು.. ಈ ಪ್ರಕರಣದ ಆಕ್ರೋಶದ ಕಾವು ಆರುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ..
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕಳೆದ ಎರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.
ವಿದ್ಯಾರ್ಥಿನಿಯು ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆಕೆಯ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಪೋಷಕರು ಐಎಎಸ್ ಮಾಡುವಂತೆ ಒತ್ತಡ ಹಾಕಿದ್ದರು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದಾಗಿ ವಿದ್ಯಾರ್ಥಿನಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ ಎನ್ನಲಾಗಿದೆ..
ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲು ಮಾಡಲಾಗಿದ್ದು, ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.








