ತಮಿಳುನಾಡಿನಲ್ಲಿ ಕಳೆದ ವಾರ ವಿದ್ಯಾರ್ಥಿನಿ ಆತ್ಮಹತ್ಯೆಯ ಪ್ರಕರಣದಿಂದ ರಾಜ್ಯಾದ್ಯಂತ ಕಿಚ್ಚು ಹೊತ್ತಿಕೊಂಡಿತ್ತು. ಪ್ರತಿಭಟನೆಗಳು ನಡೆದು ತೀವ್ರ ಸ್ವರೂಪ ಪಡೆದುಕೊಂಡಿತ್ತು.. ಅದಾದ ನಂತರ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.. ಇದೀಗ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.. ಎರಡೇ ವಾರಗಳಲ್ಲಿ 4 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ..
ಇತ್ತೀಚೆಗೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ 12ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರಗಳ ಅವಧಿಯಲ್ಲಿ ವರದಿಯಾಗಿರುವ ನಾಲ್ಕನೇ ಪ್ರಕರಣ ಇದಾಗಿದೆ.
ತಮಿಳುನಾಡಿನ ವಿರುಧ್‌ನಗರ್‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯ್ಯಂಪಟ್ಟಿ ಗ್ರಾಮದಲ್ಲಿರುವ ಮನೆಯಲ್ಲಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಪ್ರಕರಣ ದಾಖಲಾಗಿದೆ…
13 ಜುಲೈನಿಂದ ಈವರೆಗೆ 12ನೇ ತರಗತಿಯ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ..








