ಹಿಂದೂಗಳ ಅಸ್ಮಿತೆ ಕೆಣಕುವುದಕ್ಕಾಗಿ ಕಾಂಗ್ರೆಸ್ ಅಸ್ತಿತ್ವದಲ್ಲಿರುವುದೇ
ಬೆಂಗಳೂರು : ಭಗವದ್ಗೀತೆಯನ್ನು ಪಠ್ಯಕ್ರಮವಾಗಿ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ ಎಂಬ ಮಾಜಿ ಶಿಕ್ಷಣ ಸಚಿವ ತನ್ವೀತ್ ಸೇಠ್ ಹೇಳಿಕೆಗೆ ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿದೆ.
ಬಹುಸಂಖ್ಯಾತ ಹಿಂದೂಗಳ ಅಸ್ಮಿತೆಯನ್ನು ಕೆಣಕುವುದಕ್ಕಾಗಿ ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲಿರುವುದೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಶಿಕ್ಷಣ ಸಚಿವನಾಗಿರುವಾಗಲೇ ತನ್ವೀರ್ ಸೇಠ್ ವಿದ್ಯಾರ್ಥಿಗಳ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುವ “ಚಿತ್ರ” ನೋಡಿದ್ದರು.
ನೈತಿಕ ಶಿಕ್ಷಣದ ಬಗ್ಗೆ ರಾಜ್ಯದ ಜನತೆಗೆ ನಿಮ್ಮಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.
ರಾಜ್ಯಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ್ದ ತನ್ವೀರ್ ಸೇಠ್, ಈ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ.
ಇಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. tanveer-sait corona virus congress vs bjp karnataka