ಬೆಂಗಳೂರು: ತಮ್ಮ ಮೇಲಿನ ಕೊಲೆ ಯತ್ನದ ಹಿಂದಿರುವವರ ಬಗ್ಗೆ ಪತ್ತೆ ಹಚ್ಚುವಂತೆ ಕೋರಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿದವರನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆದ್ರೆ ಕೊಲೆಗೆ ಸಂಚು ರೂಪಿಸಿದ್ದ ಸಂಘಟನೆ ಅಥವಾ ವ್ಯಕ್ತಿಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿಲ್ಲ ಎಂದು ತನ್ವೀರ್ ಸೇಠ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೊಲೆ ಸಂಚಿನ ಹಿಂದೆ ಇರುವವರನ್ನು ಬಂಧಿಸಿ ನನಗೆ ನ್ಯಾಯ ಒದಗಿಸಬೇಕೆಂದು ತನ್ವೀರ್ ಸೇಠ್ ಅವರು ಮನವಿ ಮಾಡಿಕೊಂಡಿದ್ದಾರೆ.
ನವೆಂಬರ್ 17 ರಂದು ರಾತ್ರಿ ಮೈಸೂರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾಗೂ ಆತನಿಗೆ ಸಹಕರಿಸಿದವರನ್ನು ಬಂಧನ ಮಾಡಲಾಗಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ತನ್ವೀರ್ ಸೇಠ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹಲ್ಲೆ ಹಿನ್ನೆಲೆಯಲ್ಲಿ ಮುಂಜಾಗರೂಕತ ಕ್ರಮವಾಗಿ ಅವರಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ಪ್ರಕರಣದ ಹಿಂದೆ ಮುಸ್ಲಿಂ ಮೂಲಭೂತವಾದಿ ಸಂಘಟನೆಯೊಂದರ ಕೈವಾಡವಿದೆ ಎಂದು ಗೃಹ ಸಚಿವ ಬಸವರಾಜು ಬೊಮ್ಮಾಯಿ ಆರೋಪಿಸಿದ್ದರು. ಆದರೆ ಇದುವರೆಗೂ ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ತನ್ವೀರ್ ಸೇಠ್ ಗೃಹ ಸಚಿವರಿಗೆ ಪತ್ರ ಬರೆಯುವ ಮೂಲಕ ಹಲ್ಲೆ ಪ್ರಕರಣದ ಹಿಂದಿರುವ ಸಂಘಟನೆಯನ್ನು ಹಾಗೂ ಅವರ ಉದ್ದೇಶವನ್ನು ಪತ್ತೆ ಹಚ್ಚುವಂತೆ ಕೋರಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...








