ದೇಶದಾದ್ಯಂತ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ
ನವದೆಹಲಿ : ದೇಶದಾದ್ಯಂತ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ.
ಎನ್ ಐ ಎ ಇತಿಹಾಸದಲ್ಲಿಯೇ ಇದು ಅತಿ ದೊಡ್ಡ ದಾಳಿ ಇದಾಗಿದ್ದು, ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ.
ಭಯೋತ್ಪಾದನೆಗೆ ಧನಸಹಾಯ, ನಿಷೇಧಿತ ಸಂಸ್ಥೆಗಳ ಜೊತೆ ಸಂಪರ್ಕ, ದೇಶದಲ್ಲಿ ಗಲಭೆ ನಡೆಸಲು ಪ್ರಚೋದನೆ, ಮೂಲಭೂತವಾದಿ ವ್ಯಕ್ತಿಗಳಿಗೆ ತಮ್ಮ ಸಂಸ್ಥೆಯಲ್ಲಿ ಆಶ್ರಯ ಇತ್ಯಾದಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.