ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಜ್ಯದ ಸಿಎಂ ಯಡಿಯೂರಪ್ಪನಂತಹ ಘಟಾನುಘಟಿ ನಾಯಕರನ್ನೂ ಕಾಡಿರುವ ಮಹಾಮಾರಿ ಕೊರೊನಾಗೆ ಮತ್ತೋರ್ವ ಜನಪ್ರತಿನಿಧಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ತುತ್ತಾಗಿದ್ದಾರೆ.![]()
ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಖಚಿತವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಕೆಲ ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ಅವರೆಲ್ಲ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.








