RCB vs DC | ಬೆಂಗಳೂರು vs ಡೆಲ್ಲಿ ಕಾಳಗ.. ತಂಡಗಳ ಸ್ಟ್ರೆಂಥ್ ಅಂಡ್ ವೀಕ್ನೆಸ್

1 min read
IPL 2022 DC vs RCB Head to head Record saaksha tv

RCB vs DC | ಬೆಂಗಳೂರು vs ಡೆಲ್ಲಿ ಕಾಳಗ.. ತಂಡಗಳ ಸ್ಟ್ರೆಂಥ್ ಅಂಡ್ ವೀಕ್ನೆಸ್

ಇಂಡಿಯನ್ ಪ್ರಿಮಿಯರ್ ಲೀಗ್ ನ 27 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

15ನೇ ಆವೃತ್ತಿಯಲ್ಲಿ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ವರೆಗೂ ನಾಲ್ಕು ಪಂದ್ಯಗಳನ್ನಾಡಿದೆ. ಇದರಲ್ಲಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಕಳೆದ ಪಂದ್ಯದಲ್ಲಿ ಮುಂಬೈ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 44 ರನ್ ಗಳ ಗೆಲುವು ಸಾಧಿಸಿತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಅಂಕ ಹೆಚ್ಚಿಸಿಕೊಳ್ಳವ ತವಕದಲ್ಲಿದೆ.

ಡೆಲ್ಲಿ ತಂಡ ಸ್ಟ್ರೆಂಥ್ ವೀಕ್ನೆಸ್

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಾಲಿಡ್ ಆಗಿದೆ.  ಪೃಥ್ವಿ ಷಾ ಮತ್ತು ಡೇವಿಡ್ ವಾರ್ನರ್ ಆರಂಭಿಕರಾಗಿ ಅಬ್ಬರಿಸುತ್ತಿದ್ದಾರೆ. ಮಿಡಲ್ ಆರ್ಡರ್ ನಲ್ಲಿ ರಿಷಬ್ ಪಂತ್ ಮತ್ತು ಲಲಿತ್ ಯಾದವ್, ರೋವ್ಮನ್ ಪೊವೆಲ್ ತಂಡಕ್ಕೆ ನೆರವಾಗಬಲ್ಲರು. ಸ್ಲಾಗ್ ಓವರ್ ಗಳಲ್ಲಿ  ಅಕ್ಸರ್ ಪಟೇಲ್ ಮತ್ತು ಶಾರ್ದೂಲ್ ಥಾಕೂರ್ ಸಿಕ್ಸರ್ ಗಳ ಸುರಿಮಳೆ ಸುರಿಸಬಲ್ಲರು.  ಅನ್ರಿಚ್ ನೋರ್ಟ್ಜೆ ಮತ್ತು ಮುಸ್ತಾಫಿಜುರ್ ಬೌಲಿಂಗ್  ವೇಗದ ಬೌಲಿಂಗ್ ಜೋಡಿಯಾದ್ರೆ, ಕುಲ್ ದೀಪ್ ಯಾದವ್  ಸ್ಪಿನ್ ಅಸ್ತ್ರವಾಗಿದ್ದಾರೆ.

tata-ipl-2022-dc-vs-rcb match prediction  saaksha tv

ಇತ್ತ ಫಾಫ್ ಡುಪ್ಲಸಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15ನೇ ಆವೃತ್ತಿಯಲ್ಲಿ ಐದು ಪಂದ್ಯಗಳನ್ನು ಆಡಿದೆ. ಇದರಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 2 ಪಂದ್ಯಗಳನ್ನು ಸೋತಿದೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದ್ದರು. ಈ ಪಂದ್ಯದಲ್ಲಿ ಬೆಂಗಳೂರು ತಂಡ 23 ರನ್ ಗಳಿಂದ ಸೋಲುಂಡಿದೆ.

ಬೆಂಗಳೂರು ತಂಡದ ಸ್ಟ್ರೆಂಥ್ ಅಂಡ್ ವೀಕ್ನೆಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಟಾಪ್ ಆರ್ಡರ್ ಬ್ಯಾಟಿಂಗ್ ದೊಡ್ಡ ಸಮಸ್ಯೆಯಾಗಿದೆ. ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಅನುಜ್ ರಾವತ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುತ್ತಿಲ್ಲ.  ಆದರೆ ಹೊಸಬ ಸುಯೇಶ್ ಪ್ರಭುದೇಸಾಯಿ, ಶಹಬಾಸ್ ಅಹ್ಮದ್ ಮತ್ತು ದಿನೇಶ್ ಕಾರ್ತಿಕ್ ಆಟ ಎದುರಾಳಿಯ ನಿದ್ದೆಗೆಡಿಸಿದೆ. ವನಿಂದು ಹಸರಂಗ ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ನಿರೀಕ್ಷೆ ಮಾಡಿದಷ್ಟು ಮಿಂಚಿತ್ತಿಲ್ಲ. ಹರ್ಷಲ್ ಪಟೇಲ್ ಕಂ ಬ್ಯಾಕ್ ಮಾಡೋದು ಪಕ್ಕಾ. ಮೊಹಮ್ಮದ್ ಸಿರಾಜ್ ಬದಲಿಗೆ ಸಿದ್ಧಾರ್ಥ್ ಕೌಲ್ ಗೆ ಚಾನ್ಸ್ ಸಿಗುವ ಸಾಧ್ಯತೆ ಇದೆ. ಜೋಶ್ ಹ್ಯಾಜಲ್ ವುಡ್ ಸ್ಥಾನ ಪಕ್ಕಾ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd