ಭಾರೀ ಮಳೆಗೆ ಮಲೆನಾಡು, ಕರಾವಳಿ ಜನ ಹೈರಾಣು
ಮಡಿಕೇರಿ : ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಗಾಳಿ ಸಹಿತ ತುಂತುರು ಮಳೆಯಾಗುತ್ತಿದೆ. ದಿನವಿಡೀ ಮಳೆ ಸುರಿಯುವ ಸಾಧ್ಯತೆ ಇದ್ದು, ಅತ್ತ ಅರಬ್ಬಿ ಸಮುದ್ರದಲ್ಲಿ ಅಲೆಗಳ ಆರ್ಭಟ ಜೋರಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮರವಂತೆ ಉಪ್ಪುಂದ ಪರಿಸರದಲ್ಲಿ ಕಡಲ್ಕೊರೆತ ಉಂಟಾಗಿದೆ. ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಾಫಿನಾಡಿನಲ್ಲಿ ಹಲವೆಡೆ ತುಂತುರು ಮಳೆಯಾಗುತ್ತಿದ್ದು, ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ಹಲವೆಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಶುರುವಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.