ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಎದ್ದಿರುವ ಹಿನ್ನೆಲೆ ರಾಜ್ಯದ ಕರಾವಳಿ ಹಾಗೂ ಮಲೆನಾಡುವ ಬಾಗಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗ್ತಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಾಗಿದ್ದು, ಕಡಲ್ಕೊರೆತ ಸಂಭವಿಸಿದೆ.
ಕೊಡಗು ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಎಡಬಿಡದೆ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಗೆ ಜನ ಆತಂಕಗೊಂಡಿದ್ದಾರೆ. ಮಡಿಕೇರಿ, ವಿರಾಜಪೇಟೆ ಸೇರಿದಂತೆ ವಿವಿಧೆಡೆ ವರುಣನ ಆರ್ಭಟ ಜೋರಾಗಿದೆ.
ಮಡಿಕೇರಿ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕೊಡಗು ಜಿಲ್ಲೆಯಲ್ಲಿ ಸಹ ಎರಡು ದಿನಗಳು ರೆಡ್ ಅಲರ್ಟ್ ಘೊಷಿಸಲಾಗಿದೆ. ಗುಡ್ಡಗಾಡು ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಮಧ್ಯಾಹ್ನದ ಬಳಿಕ ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.