ತೌಕ್ತೆ ಎಫೆಕ್ಟ್ : 1 ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಿದ ನಮೋ modi
ಅಹಮದಾಬಾದ್ : ತೌಕ್ತೆ ಚಂಡಮಾರುತದ ಅಬ್ಬರದಿಂದ ಗುಜರಾತ್ ತತ್ತರಿಸಿದ್ದು, ಪ್ರವಾಹ ಪೀಡಿತರ ನೆರವಿಗಾಗಿ ಪ್ರಧಾನಿ ನರೇಂದ್ರ ಮೋದಿ 1 ಸಾವಿರ ಕೋಟಿ ರೂ. ತಾತ್ಕಾಲಿಕ ಅನುದಾನ ಘೋಷಣೆ ಮಾಡಿದ್ದಾರೆ.
ತೌಕ್ತೆ ಅಪ್ಪಳಿಸಿದ ಬಳಿಕ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ನ ಭಾವನಗರಕ್ಕೆ ಆಗಮಿಸಿ ವೈಮಾನಿಕ ಸಮೀಕ್ಷೆ ಕೈಗೊಂಡರು.
ಪ್ರಧಾನಿ ನರೇಂದ್ರ ಮೋದಿ ಉನಾ, ದಿಯು, ಜಫರಾಬಾದ್ ಮತ್ತು ಮಹುವಾಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮೀಕ್ಷೆಯ ನಂತರ ಪ್ರಧಾನಿ ಅಹಮದಾಬಾದ್ನಲ್ಲಿ ಪರಿಶೀಲನಾ ಸಭೆ ಸಹ ನಡೆಸಿದರು.
ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಾವಿರ ಕೋಟಿ ರೂ. ಪರಿಹಾರದ ಅನುದಾನ ಘೋಷಣೆ ಮಾಡಿದ್ದಾರೆ.