ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

1 min read

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ನವದೆಹಲಿ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ ಚಂದ್‌  ಗೆಹ್ಲೋಟ್‌ ಅವರು ಇದೀಗ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಹಾಲಿ ರಾಜ್ಯಪಾಲರಾದ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ.  ಹೀಗಾಗಿ ಅವರ ಸ್ಥಾನಕ್ಕೆ ತಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಬಂದಿದೆ.

ಅಂದ್ಹಾಗೆ ತಾವರ್ ಚಂದ್ ಅವರು 3 ಬಾರಿ ಮಧ್ಯಪ್ರದೇಶ ಶಾಸಕರಾಗಿ, 4 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ ಅವರು ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.

ಹಫೀಜ್ ಮನೆ ಬಳಿ ಸ್ಫೋಟದ ಹಿಂದೆ ಭಾರತದ : ಪಾಕ್  ಆರೋಪ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd