ಚಾಮರಾಜನಗರ : ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಎರಡನೇ ಮಹಡಿಯಿಂದ ಬಿದ್ದು ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಕೊಳ್ಳೇಗಾಲದಲ್ಲಿ (Kollegala) ನಡೆದಿದೆ. ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ಪುಟ್ಟಿ ಸಾವನ್ನಪ್ಪಿದ ಶಿಕ್ಷಕಿ. ಜೋಕಾಲಿಯಿಂದ ಬಿದ್ದು ಗಾಯಗೊಂಡಿದ್ದ ಶಿಕ್ಷಕಿಯನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಎರಡು ದಿನಗಳ ಕಾಲ ಜೀವನ್ಮರಣದ ನಡುವೆ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಯಳಂದೂರು ತಾಲೂಕಿನ ಮಾಂಬಳ್ಳಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಕುರಿತು ಕೊಳ್ಳೇಗಾಲ ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.