ಧಾರವಾಡ: ಇತ್ತೀಚೆಗಷ್ಟೇ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನಿವೃತ್ತ ಶಿಕ್ಷಕಿಯೊಬ್ಬರು ಸಾವನ್ನಪ್ಪಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿಯ ಓಂನಗರದಲ್ಲಿ ಈ ಪ್ರಕರಣ ನಡೆದಿತ್ತು. ಗಿರಿಜಾ ನಡೂರಮಠ (63) ಸಾವನ್ನಪ್ಪಿದ ಶಿಕ್ಷಕಿ. ಶಿಕ್ಷಕಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಸಹಜ ಸಾವು ಅಥವಾ ಆತ್ಮಹತ್ಯೆ ಇರಬಹುದು ಎಂದು ಎಲ್ಲರೂ ಊಹಿಸಿದ್ದರು. ಸದ್ಯ ಈ ಪ್ರಕರಣವನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾಗಿರುವ ಶಿಕ್ಷಕಿ ಮಂಜುನಾಥ ದಂಡಿನ ಎಂಬ ಯುವಕನೊಂದಿಗೆ ಹಣದ ವ್ಯವಹಾರ ಇಟ್ಟುಕೊಂಡಿದ್ದರು. ಸುಮಾರು 10 ಲಕ್ಷ ರೂ. ಹಣ ನೀಡಬೇಕಿತ್ತು. ಹೀಗಾಗಿ ಆತ ಹತ್ಯೆ ಮಾಡಿ ಪರಾರಿಯಾಗಿದ್ದ ಎಂಬುವುದು ತನಿಖೆಯಿಂದ ತಿಳಿದು ಬಂದಿತ್ತು.
ಶಿಕ್ಷಕಿಯ ಕತ್ತು ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಆರಂಭದಲ್ಲಿ ಯಾವುದೇ ಗುರುತು ಪತ್ತೆಯಾಗಿರಲಿಲ್ಲ. ದೇಹವನ್ನು ಪರೀಕ್ಷಿಸಿದಾಗ ಕುತ್ತಿಗೆಯ ಭಾಗದಲ್ಲಿ ಸಣ್ಣ ಕಲೆ ಕಂಡಿದ್ದು, ಈ ಮೂಲಕ ತನಿಖೆ ಕೈಗೊಂಡು ಆರೋಪಿಯನ್ನು ಪೊಲೀಸರು ಬಂಧಿಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.