ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ ವಜಾ Saaksha Tv
ಮೈಸೂರು: ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಶಿಕ್ಷಕನ್ನು ಶಾಲೆಯಿಂದ ವಜಾ ಮಾಡಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯಲ್ಲಿ ನಡೆದಿದೆ.
ಖಾಸಗಿ ಶಾಲೆಯ ಮುಖ್ಯಶಿಕ್ಷಕರಾದ ಆರ್ ಎಂ ಅನಿಲ್‌ಕುಮಾರ್. ಇವರು ವಿದ್ಯಾರ್ಥಿನಿಯ ಜೊತೆ ಶಾಲೆ ಕೊಠಡಿಯೊಂದರಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಹಾಗಾಗಿ, ಆ ಖಾಸಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿತು. ಮುಖ್ಯಶಿಕ್ಷಕ ಆರ್ ಎಂ ಅನಿಲ್ಕುಮಾರ್ನನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ.