ಟೀಚರ್ ಎಲಿಜಿಬಿಲಿಟಿ ಟೆಸ್ಟ್ (ಟಿಇಟಿ) ಮುಂದೂಡಿಕೆ
ಬೆಂಗಳೂರು, ಜುಲೈ 8 : ಜುಲೈ12 ರಂದು ರಾಜ್ಯದಲ್ಲಿ ನಡೆಯಬೇಕಿದ್ದ ಟೀಚರ್ ಎಲಿಜಿಬಿಲಿಟಿ ಟೆಸ್ಟ್ ಮುಂದೂಡಿಕೆ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಭಾನುವಾರ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಜುಲೈ 12ರಂದು ಟಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿತ್ತು. ಆದರೆ ಭಾನುವಾರದಂದು ಲಾಕ್ ಡೌನ್ ಜಾರಿಯಲ್ಲಿ ಇರಲಿದೆ. ಈ ಹಿನ್ನೆಲೆಯಲ್ಲಿ ಜುಲೈ 12ರಂದು ಭಾನುವಾರ ನಡೆಯಬೇಕಿದ್ದ ಟಿಇಟಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಮುಂದಿನ ಟಿಇಟಿ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ಅವರು ಸ್ಪಷ್ಟ ಪಡಿಸಿದ್ದಾರೆ.







