ರಾಂಚಿ : ಹಣೆಗೆ ಬಿಂದಿ (Bindi) ಹಚ್ಚಿಕೊಂಡಿದ್ದಕ್ಕೆ ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು (Student) ಶಿಕ್ಷಕಿಯೊಬ್ಬರು (Teacher) ಥಳಿಸಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ (Dhanbad) ನಡೆದಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (NCPCR) ಅಧ್ಯಕ್ಷೆ ಪ್ರಿಯಾಂಕ್ ಕಾನೂಂಗೊ, ವಿದ್ಯಾರ್ಥಿನಿಯೊಬ್ಬಳು ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದಕ್ಕೆ ಶಿಕ್ಷಕಿ ಥಳಿಸಿದ್ದಾರೆ. ಹೀಗಾಗಿ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆಂದು ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತನಿಖೆ ನಡೆಸಲು ಮನವಿ ಮಾಡಿದ್ದಾರೆ.
ಧನ್ಬಾದ್ನ ಟೆತುಲ್ಮರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಿಕ್ಷಕಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.