ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆಗಾಗಿ ಸಿಎಂಗೆ ಪರಿಷತ್ ಸದಸ್ಯರ ಮನವಿ
ಬೆಂಗಳೂರು : ಲಾಕ್ ಡೌನ್ ನಿಂದ ಶಿಕ್ಷಕ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆಗಾಗಿ ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್ ಸದಸ್ಯರು ಮನವಿ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಕೆ. ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾದ ಪರಿಷತ್ ಸದಸ್ಯರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ವೈಗೆ ಮನವಿ ಸಲ್ಲಿಸಿದ್ದಾರೆ. ವಿಶೇಷ ಪ್ಯಾಕೇಜ್ ಘೋಷಿಸಿ, ಶಿಕ್ಷಕರ ನೆರವಿಗೆ ನಿಲ್ಲುವಂತೆ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಲಾಕ್ ಡೌನ್ ನಿಂದ ಖಾಸಗಿ ಹಾಗೂ ಅನುದಾನಿತ ಶಿಕ್ಷಕರು ಸಾಕಷ್ಟು ಸಮಸ್ಯೆಗೆ ಒಳಗಾಗಿದ್ದು, ಅವರಿಗೆ ನೆರವಾಗುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








